NEWSವಿದೇಶ

ಹೊರರಾಜ್ಯದ ಕನ್ನಡಿಗರ ಕೂಗು ರಾಜ್ಯ ಸರ್ಕಾರಕ್ಕೆ ಕೇಳಿಸುತ್ತಿಲ್ಲ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೇಸರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದೇಶ ಮತ್ತು ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಲಕ್ಷಾಂತರ ಮಂದಿ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಮನವಿ ಮಾಡಿಕೊಂಡಿದ್ದು, ಅವರಿಗೆ ರಾಜ್ಯ ಸರ್ಕಾರ ಸ್ಪಂದಿಸದಿರುವುದು ನ್ಯಾಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಹೊರ ರಾಜ್ಯದಲ್ಲಿ ನೆಲೆಸಿರುವ ಕನ್ನಡಿಗರ ಕೂಗು ರಾಜ್ಯದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿಸದಿರುವುದು ದುರಂತವೇ ಸರಿ. ಇನ್ನಾದರೂ ಅವರ ಅರ್ತನಾದಕ್ಕೆ  ಸರ್ಕಾರ ಸ್ಪಂದಿಸಿ ಶೀಘ್ರದಲ್ಲೇ ಅವರನ್ನು ತಾಯ್ನಾಡಿಗೆ ಕರೆಯಿಸಿಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ವಿಮಾನದ ಮೂಲಕ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಕರೆಸಿಕೊಳ್ಳಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದ ಡಿಕೆಶಿ ಕೊರೊನಾ ನಿಯಂತ್ರಣ ಹಾಗೂ ಸಂಬಂಧಪಟ್ಟ ಕೆಲಸಗಳಿಗೆ ಸರ್ಕಾರಕ್ಕೆ ಸಹಕರಿಸಲು ಪ್ರತಿಪಕ್ಷ ಕಾಂಗ್ರೆಸ್ ಸಿದ್ಧವಿ ಎಂದು ಪುನರ್‌ ಉಚ್ಚರಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply