ಬೆಂಗಳೂರು: ರಾಜ್ಯದಲ್ಲಿ ಜೂನ್ 25ರಿಂದ ನಡೆಸಲು ಉದ್ದೇಶಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕೊರೊನಾ ಸೋಂಕು ಹರಡುವ ಭಯವಿರುವುದರಿಂದ ರದ್ದು ಮಾಡಬೇಕು ಎಂದು ಹೈಕೋರ್ಟ್‌ಗೆ ವಕೀಲರೊಬ್ಬರು ಸಾರ್ವಜಿನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ವಕೀಲ ಲೋಕೇಶ್ ಎಂಬುವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ಹೈ ಕೋರ್ಟ್ ಇದೇ ತಿಂಗಳು 27ರಂದು (ಮೇ 27) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪ್ರಸ್ತುತ 1ರಿಂದ 9ನೇ ತರಗತಿವರೆಗೆ ಪರೀಕ್ಷೆಯನ್ನು ಕೊರೊನಾ ಸೋಂಕು ಹರಡಲಿದೆ ಎಂಬ ಭಯದಲ್ಲಿ ರದ್ದು ಮಾಡಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ಅದೇ ರೀತಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಕೊರೊನಾ ಭಯವಿರುವುದರಿಂದ ಸಾಮೂಹಿಕಾವಾಗಿ ಪಾಸ್ ಮಾಡಿ ಅವರ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹೆಚ್ಚಾಗುತ್ತಲೇ ಇದೆ ಇಂಥ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಿದರೆ ಮಕ್ಕಳು ಕೊರೊನಾಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ ಅದ್ದರಿಂದ ಈ ಬಗ್ಗೆ ಶಿಕ್ಷಣ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail