NEWSನಮ್ಮರಾಜ್ಯ

ಭಾರಿ ಮಳೆಗೆ ಕುಸಿಯಿತು ಕೆಂಗೇರಿ ಬಳಿ ವೃಷಭಾವತಿ ನದಿ ತಡೆಗೋಡೆ, ರಸ್ತೆಗೆ ಹರಿದ ನೀರು ಸಂಚಾರ ಅಸ್ತವ್ಯಸ್ತ

ಮಳೆ ನೀರಲ್ಲಿ ತೆಲಿದ ಕಾರುಗಳು, ಅರ್ಧ ಮುಳುಗಿದ ಕೆಎಸ್‌ಆರ್‌ಟಿಸಿ ಬಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಧಾರಾಕಾರ ಮಳೆ ಸಿನಿಕಾನ್ ಸಿಟಿಯಲ್ಲಿ ಇಂದು ಭಾರಿ ಅವಾಂತರವನ್ನೇ ಸೃಷ್ಟಿಸಿದ್ದು, ವೃಷಭಾವತಿ ನದಿ ತುಂಬಿಹರಿದ ಪರಿಣಾಮ ಕೆಂಗೇರಿ ಬಳಿ ತಡೆಗೋಡೆ ಸೇರಿ ಅರ್ಧ ರಸ್ತೆ ಕೊಚ್ಚಿ ಹೋಗಿದೆ. ಭಾರಿ ಪ್ರಮಾಣದ ನೀರು ರಸ್ತೆಗೆ ನುಗ್ಗಿದ್ದು, ಅರ್ಧ ಬಸ್ ಮುಳುಗಿದರೆ, ಕಾರುಗಳು ತೇಲು ತ್ತಿದ್ದವು.

ಬರೋಬ್ಬರಿ 65.5 ಮಿಲಿ ಮೀಟರ್ ಮಳೆ ಕೆಂಗೇರಿಯಲ್ಲಿ ಬಿದ್ದಿದ್ದು, ಹೀಗಾಗಿ ವೃಷಭಾವತಿ ನದಿಯ ಒಳ ಹರಿವು ಹೆಚ್ಚಾಗಿದೆ. ಇದರಿಂದಾಗಿ ಮೈಸೂರು ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಕೆಂಗೇರಿಯ ದುಬಾಸಿಪಾಳ್ಯ ಬಳಿ ತಡೆಗೋಡೆ ಕೊಚ್ಚಿ ಹೋಗಿದ್ದು, ಅರ್ಧ ರಸ್ತೆ ಸಹ ಕುಸಿದಿದೆ. ರಸ್ತೆ ಮೇಲೆ 5 ಅಡಿಯಷ್ಟು ನೀರು ನಿಂತಿದ್ದು, ಕಾರುಗಳು ತೇಲುತ್ತಿದ್ದವು. ಬಸ್‍ಗಳು ಸಹ ಅರ್ಧದಷ್ಟು ಮುಳುಗಿದ್ದವು.. ಕಾರನ್ನು ರಸ್ತೆಯಲ್ಲಿಯೇ ಬಿಟ್ಟು ಚಾಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದ.

ರಸ್ತೆ ತಡೆಗೋಡೆ ಹಾಗೂ ಅರ್ಧ ರಸ್ತೆ ಕೊಚ್ಚಿ ಹೋಗಿದ್ದರಿಂದ ಕೆಲ ಕಾಲ ಸಂಚಾರವನ್ನು ಸ್ಥಗಿತಗೊಳಿಸಿಲಾಗಿತ್ತು. ನಂತರ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಯಿತು. ಮಳೆ ನಿಂತರೂ ನದಿಯಲ್ಲಿ ಪ್ರವಾಹ ಇಳಿದಿಲ್ಲ. ಇದರಿಂದಾಗಿ ವಾಹನ ಸವಾರರು ತೀವ್ರ ಆತಂಕಗೊಂಡಿದ್ದಾರೆ. ಯಾವಾಗಲೂ ಬ್ಯುಸಿಯಾಗಿರುತ್ತಿದ್ದ ರಸ್ತೆ ಕೊಚ್ಚಿ ಹೋಗಿದ್ದರಿಂದ ಕಿಲೋಮೀಟರ್‍ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.

ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ  ಮೈಸೂರು ರಸ್ತೆಯಲ್ಲಿ ನದಿಗೆ ಕಟ್ಟಿದ ತಡೆಗೋಡೆ ಬಿದಿದ್ದೆ ಹಾಗೂ ರಸ್ತೆ ಕೂಡ ಕುಸಿದಿದೆ. ಇಂಜಿನಿಯರ್‌ ಪ್ರಕಾರ ಮೆಟ್ರೋ ಪಿಲ್ಲರ್‍ಗೆ ಏನೂ ತೊಂದರೆ ಇಲ್ಲ ಎಂದು ತಿಳಿಸಿದರು.

ಇದೀಗ ಮೈಸೂರ್ ರಸ್ತೆಯ ಒಂದು ಬದಿಯನ್ನು ಬಂದ್ ಮಾಡಿದ್ದೇವೆ. ಕಾಮಗಾರಿ ಮುಗಿಯುವವರೆಗೂ ರಸ್ತೆ ಬಂದ್ ಮಾಡಲಾಗುವುದು ಎಂದು ಭಾಸ್ಕರ್ ರಾವ್ ಮಾಹಿತಿ ನೀಡಿದರು.

ವೃಷಭಾವತಿ ನದಿಯ ತಡೆಗೋಡೆ 150ಕ್ಕೂ ಹೆಚ್ಚು ಮೀಟರ್ ಕುಸಿದಿದ್ದು, ರಸ್ತೆ ಸಹ ಕುಸಿಯುತ್ತಿದೆ. ನೀರು ಕಡಿಮೆಯಾದ ತಕ್ಷಣ ಕಾಮಗಾರಿ ಪ್ರಾರಂಭ ಮಾಡುತ್ತೇವೆ. ಮೊದಲು ರಸ್ತೆ ಮತ್ತೆ ಕುಸಿಯದಂತೆ ಮರಳಿನ ಚೀಲ ಹಾಕುತ್ತೇವೆ. ಮೆಟ್ರೋ ಪಿಲ್ಲರ್‍ಗೆ ಸದ್ಯಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮಳೆ ನೀರು ಕಾಲುವೆ ಮುಖ್ಯ ಇಂಜಿನಿಯರ್ ಬಸವರಾಜ್  ಮಾಹಿತಿ ನೀಡಿದರು.

 

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...