NEWSನಮ್ಮಜಿಲ್ಲೆ

ಬಿಎಂಟಿಸಿ ನೌಕರರಿಗೆ ಸೋಂಕು ಹರಡದಂತೆ ಪಿಪಿಇ ಕಿಟ್‌ ನೀಡಿ:  ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಮರ್ಪಕವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ಸಿಗುತ್ತಿಲ್ಲ ಎಂದು ಬಿಎಂಟಿಸಿ ನೌಕರರು ಅಳಲು ತೋಡಿಕೊಳ್ಳುತ್ತಿದ್ದರೂ ಸಹ ಸ್ವಲ್ಪವೂ ಸ್ಪಂದಿಸದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಈ ನಿರ್ಲಕ್ಷ್ಯತನವನ್ನು ಆಮ್ ಆದ್ಮಿ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ವೇಳೆಯಲ್ಲೇ ಈ ರೀತಿಯ ಬೇಜವಾಬ್ದಾರಿ ವರ್ತನೆ ತೋರುತ್ತಿರುವುದು ತರವಲ್ಲ. ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟರೂ ಸಹ ಸಾರಿಗೆ ಇಲಾಖೆಯ ಅಧಿಕಾರಿಗಳಾಗಲಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಾಗಲಿ ತುಟಿ ಬಿಚ್ಚದೆ ಕುಳಿತುಕೊಂಡಿದ್ದಾರೆ. ಸೂಕ್ತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಕೇವಲ‌ ಮಾಧ್ಯಮದ ಮುಂದೆ ಮಾತ್ರ ಪ್ರದರ್ಶನ ನೀಡುವ ಅಧಿಕಾರಿಗಳು, ಸಚಿವರ ಬೇಜವಾಬ್ದಾರಿ ವರ್ತನೆ‌ ತರವಲ್ಲ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ಸಾವಿರಾರು ಜನ ಬಿಎಂಟಿಸಿಯಲ್ಲಿ ಪ್ರಯಾಣಿಸಲು ಪ್ರಾರಂಭಿಸಿದ್ದಾರೆ ಇಂತಹ ಸಂದರ್ಭದಲ್ಲೇ ಯಾವುದೇ ರೀತಿಯ ಮುಂಜಾಗ್ರತೆವಹಿಸದೆ ಇದ್ದರೆ ಸೋಂಕು ಸಮುದಾಯಕ್ಕೆ ಹರಡಿದರೆ, ಇದರ ಹೊಣೆಯನ್ನು ಸಚಿವರು ಹಾಗೂ ಅಧಿಕಾರಿಗಳು ಹೊರುವರೇ??.

ಬಿಎಂಟಿಸಿ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸೋಂಕು ಹರಡಿದರೆ ಅವರೆಲ್ಲರ ಚಿಕಿತ್ಸಾ ವೆಚ್ಚವನ್ನು ಅಧಿಕಾರಿಗಳು ಹಾಗೂ ಸಚಿವರ ಸಂಬಳದಿಂದ ಕಟ್ಟಿಕೊಡಬೇಕು ಹಾಗೂ ಪರಿಹಾರವನ್ನು ಸಹ ನೀಡಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದರು.

ನೌಕರರಿಗೆ ಉತ್ತಮ ಗುಣಮಟ್ಟದ ಮಾಸ್ಕ್, ಸ್ಯಾನಿಟೈಜರ್, ಕೈಗವಸು, ಸುರಕ್ಷತಾ ಸಾಧನಗಳನ್ನು ನೀಡಬೇಕು ಹಾಗೂ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲೇಬೇಕು‌ ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು