ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಗೊಂದಲದ ನಡೆಯನ್ನು ಆಮ್ ಅದ್ಮಿ ಪಕ್ಷ ಕಟು ಶಬ್ದಗಳಿಂದ ಖಂಡಿಸಿದೆ.
ಈಗಾಗಲೇ ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಪುದುಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ, ಆದರೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಿಷಯದಲ್ಲಿ ಹಗ್ಗ ಜಗ್ಗಾಟ ನಡೆಸುತ್ತಾ, ಸದಾ ಮಾಧ್ಯಮಗಳಲ್ಲಿ ಸುದ್ದಿ ಯಾಗಬೇಕೆಂಬ ಇರಾದೆ ಇಟ್ಟುಕೊಂಡು ಈ ರೀತಿಯಲ್ಲಿ ವರ್ತಿಸುತ್ತಿರುವುದು ಖಂಡನೀಯ.
ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ಸಲುವಾಗಿ ಹೀಗಾಗಲೇ 4 ಪೂರ್ವ ತಯಾರಿ ಪರೀಕ್ಷೆಗಳನ್ನು ಹಾಗೂ ಸಿದ್ಧತಾ ಪರೀಕ್ಷೆಯನ್ನು ನಡೆಸಲಾಗಿದೆ. ಈ ಕೊನೆಯ ಹಂತದ ಪರೀಕ್ಷೆಯಿಂದ ಮತ್ತೆ ಅವರ ಸಾಮರ್ಥ್ಯ ಸಾಬೀತು ಮಾಡಬೇಕು ಎನ್ನುವ ಹಠವೇಕೆ? ದೇಶದ ಪ್ರಧಾನಿಗಳ ಜೀವ ಮೊದಲು ಜೀವನ ಆನಂತರ ಎನ್ನುವ ಘೋಷವಾಕ್ಯವನ್ನು ರಾಜ್ಯ ಬಿಜೆಪಿ ಸರ್ಕಾರ ಮರೆತಿರುವಂತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಒಟ್ಟಾರೆ 15 ಲಕ್ಷ ಜನ ಈ ಪರೀಕ್ಷಾ ವ್ಯವಸ್ಥೆಗೆ ಕಾರ್ಯ ತತ್ಪರರಾಗಬೇಕಾದ ಅವಶ್ಯಕತೆ ನಿಜಕ್ಕೂ ಇದೆಯೇ ಎಂಬುದು ಪ್ರಶ್ನೆಯಾಗಿದೆ. ತಮ್ಮ ಪ್ರತಿಷ್ಠೆಗೆ ನಡೆಸುವ ಪರೀಕ್ಷೆಗಳಿಂದ ಮಕ್ಕಳ ಮೇಲಾಗುವ ಅವಘಡಗಳಿಗೆ ಸರ್ಕಾರವು ಜವಾಬ್ದಾರಿ ಯಾಗುತ್ತದೆಯೇ ? ಈ ಪರೀಕ್ಷೆಯಿಂದ ಮುಂಬೈ ನಗರದ ರೀತಿಯ ಮತ್ತೊಂದು ಧಾರಾವಿ ಸೃಷ್ಟಿಯಾಗುವುದರಲ್ಲಿ ಸಂಶಯವೇ ಇಲ್ಲ.
ಸ್ಪೇನ್ ಅಮೆರಿಕಾದಂತಹ ಹಲವು ರಾಷ್ಟ್ರಗಳು ಇದೇ ರೀತಿಯ ಪರೀಕ್ಷೆಗಳಿಂದ ಸಾಕಷ್ಟು ಅವಘಡಗಳನ್ನು ಎದುರಿಸಿರುವುದು ನಮ್ಮ ಕಣ್ಮುಂದೆಯೇ ಇರುವಾಗ ಸಚಿವರಿಗೆ ಈ ಬಗ್ಗೆ ಕಿಂಚಿತ್ತು ಅರಿವಿಲ್ಲವೇ ಎಂಬುದು ಪ್ರಶ್ನೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಆದ ಕಾರಣ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ ಶಿಕ್ಷಣ ದಾಖಲಾತಿಗೆ ಹೊಸ ಮಾನದಂಡಗಳನ್ನು ರೂಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ
ರಾಜ್ಯದ ಅನೇಕಾನೇಕ ಶಿಕ್ಷಣ ತಜ್ಞರು,ಪೋಷಕರು ಹೀಗಾಗಲೇ ಪರೀಕ್ಷೆ ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಇದನ್ನು ಪ್ರಮುಖವಾಗಿ ಪರಿಗಣಿಸಬೇಕು.
ಹೆಚ್ಚು ಶುಲ್ಕವನ್ನು ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದರೂ ಸಹ ಇದುವರೆವಿಗೂ ಯಾರ ಮೇಲೂ ಕಠಿಣ ಕ್ರಮವನ್ನು ತೆಗೆದುಕೊಳ್ಳದ ಶಿಕ್ಷಣ ಸಚಿವರ ನಡೆ ಅನುಮಾನ ಮೂಡಿಸುವಂತಿದೆ. ಪೋಷಕರಿಗೆ ವಸೂಲಿ ಆಗಿರುವ ಹೆಚ್ಚುವರಿ ಶುಲ್ಕವನ್ನು ಹಿಂತಿರುಗಿಸುವಂತಹ ಕಠಿಣ ಆದೇಶಗಳನ್ನು ಹೊರಡಿಸ ಬೇಕು ಎಂದು ಎಎಪಿ ಒತ್ತಾಯಿಸಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail