ಬೆಂಗಳೂರು: ಬೆಂಗಳೂರು ಲಾಕ್‌ಡೌನ್ ಆಗಬೇಕೆ ಬೇಡವೇ ಎಂಬ ಬಗ್ಗೆ ಸರ್ವ ಪಕ್ಷಗಳ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ಕರೆದಿರುವ ಸಭೆ ಆರಂಭವಾಗಿದೆ.
ವಿಧಾನಸೌಧದಲ್ಲಿ ನಗರದ ಸರ್ವ ಪಕ್ಷಗಳ ಸಭೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಲವು ಶಾಸಕರು ಭಾಗಿಯಾಗಿದ್ದಾರೆ..
ನಗರದ 28 ವಿಧಾನಸಭಾ ಕ್ಷೇತ್ರಗಳ ಶಾಸಕರು, ನಗರದ ಸಂಸದರು, ಪರಿಷತ್ ಸದಸ್ಯರು ಭಾಗಿಯಾಗಿದ್ದು, ಸಿಎಂ ಅವರ ಜತೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಏನು ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕ್ಷೇತ್ರದ ಜನಪ್ರತಿಗಳ ಸಲಹೆ ಪಡೆದು ಅವರ ಸಹಕಾರದಿಂದ ಕೊರೊನಾ ನಿಯಂತ್ರಣದ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಇನ್ನು ಸಭೆಯಲ್ಲಿ ಏನು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂಬುದರ ಬಗ್ಗೆ ತಿಳಿಯಬೇಕಿದೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಅವರಿಗೇ ಸರ್ಕಾರ ಪೂರ್ತಿ ಜವಾಬ್ದಾರಿ ವಹಿಸುವ ಸಾಧ್ಯತೆಯು ಇದೆ ಎನ್ನಲಾಗಿದೆ.