CrimeNEWSನಮ್ಮರಾಜ್ಯ

ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಸೆರೆ

ಸಿಸಿಬಿಯ ಸಂಘಟಿತ ಅಪರಾಧ ದಳ ‍ಪೊಲೀಸರ ಕಾರ್ಯಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದರೋಡೆಗೆ ಹೊಂಚುಹಾಕಿ ಕುಳಿತಿದ್ದ ಮೂವರು ರೌಡಿಶೀಟರ್‌ಗಳು ಸೇರಿ ಐವರನ್ನು ಕೇಂದ್ರ ಅಪರಾಧ ದಳ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ಮಾಡಿದ ಪೊಲೀಸರು ಬಾಗಲಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌, ಅಶೋಕನಗರ ನಿವಾಸಿ ಆರ್‌. ರಘು ಅಲಿಯಾಸ್‌ ಕೋತಿ ರಘು (27), ಬಸವೇಶ್ವರ ನಗರ ಠಾಣೆ ರೌಡಿಶೀಟರ್, ವಿಲ್ಸನ್‌ ಗಾರ್ಡನ್ ನಿವಾಸಿ ಎಂ. ಗಣೇಶ್‌ ಅಲಿಯಾಸ್ ಗಣಿ (27), ಪೀಣ್ಯ ಠಾಣೆ ರೌಡಿ ಶೀಟರ್‌ ಟಿ. ದಾಸರಹಳ್ಳಿ ಬಳಿಯ ಚೊಕ್ಕಸಂದ್ರ ನಿವಾಸಿ ಎನ್‌. ರಂಜನ್‌ ಅಲಿಯಾಸ್‌ ಸೀಲು (29), ಲಗ್ಗೆರೆಯ ಸುನೀಲ್‌ ಕುಮಾರ್‌ (31) ಮತ್ತು ಜಾಲಹಳ್ಳಿ ಕ್ರಾಸ್‌ನ ವಿವೇಕಾನಂದ ನಗರದ ರಾಜಶೇಖರ್‌ (27) ಎಂಬುವರನ್ನು ಬಂಧಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕಿರ್ಲೋಸ್ಕರ್‌ ರಸ್ತೆಯ ಬಳಿ ದರೋಡೆಗೆ ಸಂಚು ರೂಪಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ‌ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಬಂಧಿತರ ಪೈಕಿ ರಘು ವಿರುದ್ಧ ಬಾಗಲಗುಂಟೆ, ಪೀಣ್ಯ ಮತ್ತು ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಎರಡು ಕೊಲೆ, ಎರಡು ಕೊಲೆಯತ್ನ ಸೇರಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಗಣೇಶ್‌ ವಿರುದ್ಧ ಬಸವೇಶ್ವರ ನಗರ, ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎರಡು ಕೊಲೆ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಒಂದು ಕೊಲೆ ಯತ್ನ, ಬಸವೇಶ್ವರ ನಗರ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಂಜನ್‌ ವಿರುದ್ಧ ಪೀಣ್ಯ ಮತ್ತು ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ತಲಾ ಒದೊಂದು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಸುನೀಲ್‌ ವಿರುದ್ಧ ಮೂರು ವರ್ಷಗಳ ಹಿಂದೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಸಿಸಿಬಿಯ ಸಂಘಟಿತ ಅಪರಾಧ ದಳ ‍ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಂದು ಮಚ್ಚು, ಒಂದು ಲಾಂಗ್‌, ಎರಡು ಖಾರದ ಪುಡಿ ಪೊಟ್ಟಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ