ಬೆಂಗಳೂರು: ಬಿಎಂಟಿಸಿ ಓಡಾಟ ನಾಳೆಯಿಂದಲೇ ಆರಂಭವಾಗಲಿದೆ ಎಂದು ಸರ್ಕಾರ ಘೋಷಣೆ ಮಾಡುತ್ತಿದ್ದು, ಇನ್ನು ಜಿಲ್ಲೆಗಳ ಒಳಗೆ ಮತ್ತು ಹೊರಗೆ KSRTC ಬಸ್ ಓಡಾಟ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನು ಅಧಿಕೃತಗೊಂಡಿಲ್ಲ.
ರಾಜ್ಯದಲ್ಲಿ ರಾತ್ರಿ ವೇಳೆಯಲ್ಲಿ ವಿಧಿಸಿರುವ ಕರ್ಫ್ಯೂಕೂಡ ಸಡಿಲಿಸುವ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನಿಂತಿದೆ. ಇನ್ನು ಪ್ರಯಾಣಿಕರ ಸಾರಿಗೆ ತನ್ನ ಓಡಾಟ ಆರಂಭಿಸಿದರೆ. ರಾಜ್ಯದಲ್ಲಿ ಲಾಕ್‌ಡೌನ್ ಬಹುತೇಕ ಸಡಿಲಗೊಂಡಂತೆ ಆಗುತ್ತದೆ. ಜತೆಗೆ ಜನರ ಓಡಾಟವು ಮಾಮೂಲಿಯಾಗುತ್ತದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹೀಗೆ ಜನರ ಓಡಾಟ ಮಾಮೂಲಿಯಾದರೆ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುವುದು. ಅಲ್ಲದೆ ಈ ರೋಗದಿಂದ ಸಾವನ್ನಪ್ಪುವವರ ಸಂಖ್ಯೆ ಸಾಮಾನ್ಯವಾಗಿ ಏರಿಕೆ ಆಗುತ್ತದೆ. ಆದ್ದರಿಂದ ವಿಶೇಷವಾಗಿ ರಾಜ್ಯ ಸರ್ಕಾರ ಯಾವ ರೀತಿ ಕೊರೊನಾ ನಿರೋಧ ಶಕ್ತಿಯನ್ನು ಜನರಲ್ಲಿ ವೃದ್ಧಿಸುತ್ತದೋ ಎಂಬುವುದು ಸದ್ಯ ಯಕ್ಷ ಪ್ರಶ್ನೆಯಾಗಿದೆ.
ಬಸ್‌ಗಳಲ್ಲಿ ಜನರ ಓಡಾಟ ಪ್ರಾರಂಭವಾದರೆ. ಆವರಿಗೆ ಕೇವಲ ತರ್ಮಲ್ ಸ್ಕ್ರೀನಿಂಗ್ ಮಾತ್ರ ಮಾಡುವುದಾಗಿ ಹೇಳಿದೆ. ಇದರಿಂದ ಸಾರಿಗೆ ನೌಕರರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹೀಗಾಗಿ ಸರ್ಕಾರ ಮತ್ತು ಸಾರಿಗೆ ಇಲಾಖೆ ನೌಕರರ ಆರೋಗ್ಯದ ಬಗ್ಗೆ ಯಾವ ರೀತಿ ಕಾಳಜಿ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail