NEWSನಮ್ಮರಾಜ್ಯ

ರಾಜ್ಯ ಬಿಜೆಪಿಯಲ್ಲಿನ ಮುಸುಕಿನ ಗುದ್ದಾಟ ಇನ್ನಷ್ಟು ತಿಕ್ಕಾಟ

ಕೊರೊನಾ ನಿಯಂತ್ರಿಸುವ ಹೊಣೆ,  ಕುರ್ಚಿ ಉಳಿಸಿಕೊಳ್ಳುವ ಇಕ್ಕಟ್ಟಿನಲ್ಲಿ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ  ಮುಂದುವರಿದ ಮುಸುಕಿನ ಗುದ್ದಾಟ್ಟ ಇನ್ನಷ್ಟು ತಿಕ್ಕಾಟಕ್ಕೆ ಕಾರಣವಾಗಿದ್ದು ಇದು ಹೊಸ ಹೊಸ ತಿರುವು ಪಡೆಯುತ್ತಿದ್ದು, ಅಧಿಕಾರಕ್ಕಾಗಿ ಬಂಡಾಯ ಎದ್ದಿರುವ ಬಿಜೆಪಿ ಶಾಸಕರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರನ್ನು ಭೇಟಿ ಮಾಡಿರುವ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಕಳೆದ ನಾಲ್ಕು ದಿನಗಳ ಹಿಂದೆ ಜೆಡಿಎಸ್‌ನ ಎಚ್‌.ಡಿ. ರೇವಣ್ಣ ಅವರು ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬೆಳವಣಿಗೆಯನ್ನು ವಿವರಿಸಿದ್ದಾರೆ. ಆ ವೇಳೆ  ಸಿದ್ದು ನಾವು ಈ ಸಮಯದಲ್ಲಿ ದುಡುಕುವುದು ಬೇಡ ಸ್ವಲ್ಪ ಸಮಯದವರೆಗೆ ಕಾದು ನೋಡೋಣ ಬಳಿಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳೋಣ ಎಂದು ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಈ ನಡುವೆ ಬಿಜೆಪಿಯಲ್ಲಿ ಬಂಡಾಯ ಎದ್ದಿರುವವರ ಮುಂದಾಳತ್ವ ವಹಿಸಿರುವ ತ್ರಿಮೂರ್ತಿಗಳಲ್ಲಿ ಒಬ್ಬರಾದ ಶಾಸಕ ಉಮೇಶ್‌ ಕತ್ತಿ ಅವರು ಇತ್ತೀಚೆಗೆ ಸಿದ್ದಾಮಯ್ಯ ಅವರನ್ನು ಭೇಟಿಮಾಡಿದ್ದು ಇದು ಕೂಡ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂತ್ತಿದ್ದ ಅಸಮಾಧಾನ ಭುಗಿಲೆದಂತ್ತಾಗಿದೆ. ಇದನ್ನು ಶಮನ ಮಾಡಲು ಬಿಜೆಪಿಯ ಕೆಲ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಆದರೆ ಬಂಡಾಯ ಎದ್ದಿರುವ ಶಾಸಕರು ತಮ್ಮ ಬೇಡಿಕೆ ಈಡೇರುವ ತನಕ ನಾವು ಯಾವುದಕ್ಕೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಂದು ಕಡೆ ತಲೆ ಬಿಸಿ ಮಾಡಿಕೊಂಡಿದ್ದರೆ, ಇನ್ನೊಂದುಕಡೆ ತಮ್ಮ ಸಿಎಂ ಕುರ್ಚಿ ಉಳಿಸಿಕೊಳ್ಳುವತ್ತ ಹೆಣಗಾಡುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಈಗಾಗಲೇ ಉಪಮುಖ್ಯಮಂತ್ರಿ ಮತ್ತು ಸಚಿವರಾಗಿರುವವರಲ್ಲೂ ನಡುಕ ಉಂಟಾಗುತ್ತಿದೆ. ಪಕ್ಷದಲ್ಲಿ ಎದ್ದಿರುವ ಬಂಡಾಯವನ್ನು ಹೇಗೆ ಶಮನ ಮಾಡುವುದು ಎಂಬ ಚಿಂತೆಯಲ್ಲಿ ಇವರು ಕೂಡ ಮುಳುಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿರಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ, ಸಿಎಂ ಕೆಳಗಿಳಿಸುವರೆ ತ್ರಿಮೂರ್ತಿಗಳು?

ಒಟ್ಟಾರೆ ರಾಜ್ಯ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿಯಲ್ಲಿನ ಒಳಬೇಗುದಿ ಸದ್ಯದ ಪರಿಸ್ಥಿತಿಯಲ್ಲಿ ಶಮನವಾಗುವ ಯಾವ ದಾರಿಯೂ ಕಾಣಿಸುತ್ತಿಲ್ಲ. ಇದರಿಂದ ಇಕ್ಕಟ್ಟಿನ ಸ್ಥಿತಿಯಲ್ಲಿ ಬಿಎಸ್‌ವೈ ಸರ್ಕಾರ ಸಿಲುಕಿದ್ದು ಇದರ ಲಾಭವನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಪಡೆಯಲು ತುದಿಗಾಲಲ್ಲಿ ನಿಂತಿವೆ. ಆದರೆ ಇದು ಮುಂದೆ ಯಾವರೀತಿಯ ತಿರುವು ಪಡೆಯುವುದು ಎಂಬುದನ್ನು ಕಾದು ನೋಡಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

1 Comment

Leave a Reply