NEWSನಮ್ಮರಾಜ್ಯ

15ದಿನ ಯಾರು ರಾಜ್ಯಕ್ಕೆ ಬರುವಂತಿಲ್ಲ, ರೈತರಿಗೆ 5 ಸಾವಿರ ರೂ. ಪರಿಹಾರ

ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೆರೆ ರಾಜ್ಯದಿಂದ ಬರುವವರಿಗೆ 15 ದಿನಗಳು ನಿರ್ಬಂಧ ಹೇರಲು ಇಂದು ನಡೆದ ರಾಜ್ಯ ಸಚಿವ ಸಂಫುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿ ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ, ಸಚಿವರು ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಖ್ಯವಾಗಿ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್‌, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಬರುವವರಿಗೆ ಇದು ಅನ್ವಯವಾಗಲಿದೆ.  ಜತೆಗೆ ಇನ್ನು 15 ದಿನಗಳು ಯಾವುದೇ ದೇಶದಿಂದಲೂ ಬರುವಂತಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರೈಲು, ರಸ್ತೆ ಮತ್ತು ವಿಮಾನಯಾನ  ಮೂಲಕ  ಇನ್ನು 15ದಿನಗಳು ರಾಜ್ಯಕ್ಕೆ ಬರುವಂತಿಲ್ಲ. ಈ ಎಲ್ಲಾ ಸಂಚಾರವನ್ನು ನಿರ್ಬಂಧಿಸಲು  ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದರು.

ಮೆಕ್ಕೆ ಜೋಳ ಬೆಳೆಗಾರ ರೈತರಿಗೆ 5 ಸಾವಿರ ರೂ. ಪರಿಹಾರ
ಇನ್ನು ಮೆಕ್ಕೆ ಜೋಳ ಬೆಳೆಗಾರ ರೈತರಿಗೆ 5 ಸಾವಿರ ರೂ. ಪರಿಹಾರ ಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ರೈತರ ಉಳಿತಾಯ ಖಾತೆಗೆ ನೆರವಾಗಿ ಹಣವನ್ನು ಜಮೆ ಮಾಡಲಾಗುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply