ಬೆಂಗಳೂರು: ಸಾಮಾಜಿಕ ನ್ಯಾಯದ ಹರಿಕಾರ ಎಂಬ ಖ್ಯಾತಿಗೆ ಪಾತ್ರರಾದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ರಾಜ್ಯದ ಅಸಂಖ್ಯಾತ ಧ್ವನಿಯಿಲ್ಲದ ಜನಾಂಗವನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತಂದರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ. ದೇವರಾಜ ಅರಸು 38ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಎಂಟು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ದೂರದೃಷ್ಟಿಯುಳ್ಳ ನಾಯಕ. ಮಾನವೀಯ ತುಡಿತ ಹೊಂದಿದ ಆಡಳಿತಗಾರರಾಗಿ ಅವರು ಕೈಗೊಂಡ ನಿರ್ಧಾರಗಳು ಚರಿತಾರ್ಹವಾದುದು ಎಂದರು.
ಅರಸು ಅವರು ಜಾರಿಗೊಳಿಸಿದ ಭೂ ಸುಧಾರಣೆ, ಜೀತಾಮುಕ್ತ, ಋಣಪರಿಹಾರ ಕಾಯ್ದೆಯಂತಹ ಕ್ರಾಂತಿಕಾರಿ ನಿರ್ಧಾರಗಳು ಬಡವರು, ತಳಸಮುದಾಯದವರು ಹಾಗೂ ಕೃಷಿ ಕಾರ್ಮಿಕರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇವರು ಹಿಂದುಳಿದ ವರ್ಗಗಳಿಗೆ ಉದ್ಯೊಗದಲ್ಲಿ ಮೀಸಲಾತಿ , ಸಮಾಜದ ದುರ್ಬಲ ವರ್ಗಕ್ಕೆ ಮಾಶಾಸನದ ಮೂಲಕ ಬದುಕಿಗೆ ಭದ್ರತೆ, ನಿರುದ್ಯೋಗ ಭತ್ಯೆಯ ಮೂಲಕ ವಿದ್ಯಾವಂತ ಯುವಜನರಲ್ಲಿ ಬದುಕಿನ ಭರವಸೆಯನ್ನು ಮೂಡಿಸಿದರು. ಜೊತೆಗೆ ಹಿಂದುಳಿದ ಜನಾಂಗಕ್ಕೆ ಶಕ್ತಿ ತುಂಬುವ ಮಹತ್ವಕಾಂಕ್ಷೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ ಕೀರ್ತಿ ದೇವರಾಜ ಅರಸು ಅವರದು.
ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳು ಸಸಿಯನ್ನು ನೆಟ್ಟರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail