ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ನ್ಯಾಯಾಲಯಗಳು ಕಾರ್ಯನಿರ್ವಹಿಸದಿರುವುದರಿಂದ ಸಂಕಷ್ಟದಲ್ಲಿರುವ ವಕೀಲರಿಗೆ ನೆರವು ನೀಡಬೇಕು ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು.
ವಕೀಲರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಇದು ವಿಶೇಷ ಪ್ರಕರಣ ಎಂದು ಪರಿಗಣಿಸಿ, ವಕೀಲರ ನೆರವಿಗಾಗಿ ತಕ್ಷಣವೇ 5 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಆದೇಶಿಸಿದ್ದಾರೆ.
ನಮಗು ವಕೀಲರ ಸಮಸ್ಯೆ ಅರ್ಥವಾಗುತ್ತಿದೆ. ಆದ್ದರಿಂದ ನಿಮ್ಮ ಮನವಿಯನ್ನು ಕೂಡಲೇ ಪರಿಗಣಿಸಿದ್ದು 5 ಕೋಟಿ ರೂ. ನೆರವನ್ನು ತಕ್ಷಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ನಿಯೋಗಕ್ಕೆ ತಿಳಿಸಿದರು.
ಸಿಎಂ ಸ್ಪಂದನೆಗೆ ರಾಜ್ಯ ವಕೀಲರ ಪರಿಷತ್ ನಿಯೋಗ ಹರ್ಷ ವ್ಯಕ್ತಪಡಿಸಿದ್ದು ಕೂಡಲೆ ಹಣ ಬಿಡುಗಡೆಗೆ ಮುಖ್ಯಮಂತ್ರಿಗಳು ಆದೇಶಿಸಿರುವುದು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಂತಾಗಿದೆ ಎಂದು ಹೇಳಿದೆ.