ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶ್ವಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್‌ಡೌನ್ ಮಾಡಬೇಕೆ ಬೇಡವೆ ಎಂದು ಸಚಿವರು ಮತ್ತು ಅಧಿಕಾರಿಗಳ ಸಲಹೆ ಪಡೆಯಲು ಇಂದು ಮಧ್ಯಾಹ್ನ 1ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ಕರೆದಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಡೆಯುವ ಸಭೆಯಲ್ಲಿ ಅಧಿಕಾರಿಗಳು ಮತ್ತು ಸಚಿವರು ಏನು ಹೇಳುತ್ತಾರೆ ಎಂಬುದರ ಮೇಲೆ ಮುಂದಿನ ದಿನ ಕ್ರಮ ಜರುಗಿಸಲಾಗುವುದು. ಅಲ್ಲದೆ ಜನರು ಕೂಡ ಅನ್‌ಲಾಕ್ ಸಾಮಜೀಕ ಅಂತರ ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ನಾಳೆ ಬೆಂಗಳೂರು ನಗರದ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳು, ಸಚಿವರು ಮತ್ತು ಅಧಿಕಾರಿಗಳ ಸಭೆ ಕರೆದು ಬೆಂಗಳೂರನ್ನು ಲಾಕ್‌ಡೌನ್ ಮಾಡಬೇಕೆ ಬೇಡವೇ ಎಂಬುದರ ಬಗ್ಗೆ ಸ್ಪಷ್ಟತೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಇಂದಿನಿಂದ ಆರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲೆ ಇರುವುದರಿಂದ ಈ ಪರೀಕ್ಷೆ ಮುಗಿಯುವ ವರೆಗೂ ಅಂದರೆ ಜುಲೈ 4ರವರೆಗೂ ಯಾವುದೇ ಇಂಥ ಲಾಕ್‌ಡೌನ್ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸಿಎಂ ಅಭಿಪ್ರಾಯ ತಿಳಿಸಿದ್ದಾರೆ.
Takolli takolli urella kolle hodeda mele en madidre enu