NEWSದೇಶ-ವಿದೇಶನಮ್ಮರಾಜ್ಯ

ಕೊರೊನಾ ನಿಯಂತ್ರಣವಷ್ಟೇ ನನ್ನ ಕೆಲಸ

ಪ್ರಧಾನಿ ಮೋದಿಗೆ ಅಭಿನಂದಿಸುವ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಏರುಗತಿಯಲ್ಲಿ ಸಾಗುತ್ತಿರುವ ಕೊರನಾವನ್ನು  ನಿಯಂತ್ರಿಸುವತ್ತ ಗಮನ ಹರಿಸಿದ್ದು ಇದೆ ನನ್ನ ಕೆಲಸ ಹೀಗಿರುವಾಗ  ಬೇರೆ ವಿಷಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಲ್ಲಿನ ಬಂಡಾಯದ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಮಟ್ಟಹಾಕುವುದೊಂದೆ ನನ್ನ ಪ್ರಮುಖ ಕೆಲಸವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು  ಮೋದಿ ಗುಣಗಾನ ಮಾಡುವುದರಲ್ಲೇ ಹೆಚ್ಚು ಸಮಯ ವ್ಯಯಿಸಿದರು.   ಕೆಲ ಬಿಜೆಪಿ ನಾಯಕರು ಯಡಿಯೂರಪ್ಪ ನಮ್ಮ ನಾಯಕರಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬುದಕ್ಕೆ ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಇಡೀ ದೇಶ ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ ಹಾಗಾಗಿ ಕೇಂದ್ರದಿಂದ ಅನುದಾನ ಕಡಿಮೆ ಬಿಡುಗಡೆ ಆಗಿದೆ. ಮುಂದೆ ಆರ್ಥಿಕ ಸ್ಥಿತಿ ಸರಿಯಾಗುವ ವಿಶ್ವಾಸವಿದೆ. ಆ ಬಳಿಕ  ಹೆಚ್ಚು ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಮಾತು ಬದಲಿಸಿದರು.

ಮಹಾಮಾರಿ ಕೋರನಾದಿಂದ ದೇಶಕ್ಕೆ ರಕ್ಷಣೆ ನೀಡುವಲ್ಲಿ ಪ್ರಧಾನಿ ಯಶಸ್ವಿಯಾಗಿದ್ದಾರೆ. ದೇಶದ ಜನರ ಜೀವನ ರಕ್ಷಣೆ ಮಾಡಿದ‌ ಕೀರ್ತಿ ಮೋದಿ ಅವರಿಗೆ ಸಲ್ಲಲಿದೆ. ಕೊರೊನಾಗೆ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನೀಡಿದ್ದಾರೆ. 8 ಲಕ್ಷ ಆಹಾರ ಪದಾರ್ಥಗಳನ್ನು ರಾಜ್ಯಕ್ಕೆ ನೀಡಿದ್ದಾರೆ. ರಾಜ್ಯ ಕೂಡ 1610 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಇದಾದ ಬಳಿಕ 137ಕೋಟಿ, ಮತ್ತೆ 500 ಕೋಟಿ ಮೂರು ಪ್ಯಾಕೇಜ್ ನೀಡಿದೆ ಎಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹಲವು ದಶಕಗಳಿಂದ ತುಕ್ಕು ಹಿಡಿದಿದ್ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದು, ಕಾಯಕ ಯೋಗಿಯಾಗಿ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತವನ್ನು ಪ್ರಧಾನಿ ಮೋದಿಯವರು ನೀಡುತ್ತಿದ್ದಾರೆ. ಈ ಮೂಲಕ ದೇಶ ಕಟ್ಟುವ ಕಾಯಕಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡಿದ್ದಾರೆ  ಎಂದು ಬಣ್ಣಿಸಿದರು.

ರಾಜ್ಯದಲ್ಲಿ ಬಿಜೆಪಿ 25 ಸ್ಥಾನ ಗೆಲ್ಲುವ ಮೂಲಕ ಮೋದಿ ಅಲೆಯಲ್ಲಿ ಘಟಾನುಘಟಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ಎಚ್‌.ಡಿ. ದೇವೇಗೌಡರಂತಹ ನಾಯಕರು ಸೋಲನ್ನು ಅನುಭವಿಸಿದರು ಎಂದು ಮೋದಿ ಅವರ ಅಲೆಯನ್ನು ಶ್ಲಾಘಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಾಹನ ಅಪಘಾತ‌ ತಗ್ಗಿಸಲು ರಸ್ತೆ ಸುರಕ್ಷತಾ ಕಾಯ್ದೆ ಜಾರಿಗೆ ತರಲಾಯಿತು. ರೈತರ, ಸಾಮಾನ್ಯ ಜನರು, ಕೈಗಾರಿಕಾ ವಲಯಕ್ಕೆ ಯೋಜನೆ ರೂಪಿಸಲಾಯಿತು. ಕಿಸಾನ್ ಸಮ್ಮಾನ್ ಯೋಜನೆ, ಜಲ ಜೀವನ್ ಮಿಷನ್, ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ, ಭ್ರಷ್ಟಾಚಾರ ನಿಯಂತ್ರಣ ಕಾರ್ಯಕ್ರಮ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಬ್ಯಾಂಕ್ ಸುಧಾರಣೆಗಾಗಿ ಸಣ್ಣಪುಟ್ಟ ಬ್ಯಾಂಕ್ ವಿಲೀನಗೊಳಿಸಿದರು. ಮಕ್ಕಳ ದೌರ್ಜನ್ಯಕ್ಕೆ ಕಠಿಣ ಕಾನೂನು ಜಾರಿ, ಜಮ್ಮು ಕಾಶ್ಮೀರ ‌ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ರದ್ದುಗೊಳಿಸಲಾಯಿತು. ವಿದೇಶದಲ್ಲಿ ನೆಲೆ ಇಲ್ಲದ ನಿರಾಶ್ರಿತರಿಗೆ ಸಿಎಎ ಮೂಲಕ ಅಭಯ ಹಸ್ತ ನೀಡಿದ್ದಾರೆ  ಎಂದು ಮೋದಿ ಅವರ ಕಾರ್ಯ ವೈಕರಿಯನ್ನು ಕೊಂಡಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು