ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. ಹೀಗಾಗಿ ಭಯಬಿಟ್ಟು ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಧೈರ್ಯತುಂಬಿದ್ದಾರೆ.
ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಟ್ವಿಟರ್ ಮೂಲಕ ಶುಭಕೋರಿದ್ದಾರೆ.
Vidyarthigala jeevakke bele illa.adru all thebest .