NEWSನಮ್ಮಜಿಲ್ಲೆರಾಜಕೀಯ

ಜೂ.29ರಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಕೈ ನಾಯಕರ ಸೈಕಲ್‌ ಚಳವಳಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿರೋಧಿಸಿ ಸೋಮವಾರ (ಜೂ.29) ಸೈಕಲ್ ಚಳವಳಿ ಹಮ್ಮಿಕೊಳ್ಳಲು ರಾಜ್ಯ  ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.

ಹೋರಾಟದ ರೂಪುರೇಷೆ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.

ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತಿತರ ವಿಷಯಗಳನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ರಣಕಹಳೆ ಮುಳುಗಿಸಲು ಸಭೆಯಲ್ಲಿ  ನಾಯಕರು ತೀರ್ಮಾನಿಸಿದ್ದಾರೆ.

ಈ ಕುರಿತು  ಮಾತನಾಡಿದ ಶಿವಕುಮಾರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಇದೇ 29 ರಂದು ಸೈಕಲ್ ಚಳವಳಿ ಹಮ್ಮಿಕೊಳ್ಳುತ್ತೇವೆ. ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಮಾಡಲು ಕಾರ್ಯಕರ್ತರು ಸಜ್ಜಾಗಿದ್ದು, ಇನ್ನು ನಾನು ಮತ್ತು ಸಿದ್ದರಾಮಯ್ಯ ಅಂದು ಸೈಕಲ್‌ನಲ್ಲಿ ಓಡಾಡುತ್ತೇವೆ. ಕಾರ್ಯಕರ್ತರು ಕೂಡ ಈ ಚಳವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ದಪ್ಪ ಚರ್ಮದ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಜೈಲ್ ಭರೋ ಸೇರಿದಂತೆ ವಿವಿಧ ರೀತಿಯ ಹೋರಾಟ ಅನಿವಾರ್ಯವಾಗಿದೆ ಎಂದು ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಆರು ವರ್ಷಗಳಲ್ಲಿ ದರ ಏರಿಕೆ ಮತ್ತು ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಮೂಲಕ ಕೇಂದ್ರ ಸರಕಾರ ಸುಮಾರು 18 ಲಕ್ಷ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿರುವುದರಿಂದ ಪೆಟ್ರೋಲ್ ಡೀಸೆಲ್ ಇಪ್ಪತ್ತೈದು ರೂಪಾಯಿ ಆಸುಪಾಸಿನಲ್ಲಿ ಇರಬೇಕಿತ್ತುಎಂದರು.

ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವೈಫಲ್ಯದ ಪರಿಣಾಮ ಆರ್ಥಿಕ ಸ್ಥಿತಿಗೆ ಪಾರ್ಶ್ವವಾಯು ಹೊಡೆದಿದೆ.  ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು, ಸಿಬ್ಬಂದಿಗೆ ಸೌಲಭ್ಯಗಳೇ ಇಲ್ಲ ಎಂದು ಗುಡುಗಿದರು.

ಇನ್ನು ಸಾಮಾನ್ಯ ಜನರಿಗೆ ಕೊರೊನಾ ಪಾಸಿಟಿವ್‌ ಇದೆ ಎಂದು ದೃಢಪಟ್ಟರು ಅವರನ್ನು ಕೋವಿಡ್‌ ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಸರ್ಕಾರ ಸೋತಿದೆ. ಈ ಎಲ್ಲದರ ವಿರುದ್ಧ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಸಭೆಯಲ್ಲಿ ಎಲ್ಲಾ ನಾಯಕರು ಒಮ್ಮತದ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

1 Comment

  • Madi madi enu prayojana illa ansuthe nachike anjike bittavarige ene madidru aste ansuthe

Leave a Reply

error: Content is protected !!
LATEST
ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ