ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ಸ್ಫೋಟ ಸಂಭವಿಸಿದ್ದು ಮತ್ತೆ ರಾಜ್ಯದಲ್ಲಿ ಸೆಂಚುರಿ ಬಾರಿಸಿದೆ. ಈ ಮೂಲಕ ಗುರುವಾರ ಮಧ್ಯಾಹ್ನದ ವೇಳೆಗೆ 116 ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು 1578 ಜನರು ಸೋಂಕಿಗೆ ಒಳಗಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಗುರುವಾರ ಒಂದೇದಿನ 116 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಅದರಲ್ಲಿ ಅತಿ ಹೆಚ್ಚು ಉಡುಪಿಯಲ್ಲಿ 25 ಕೊರೊನಾ ಪಾಸಿಟಿವ್ ಆಗಿದೆ. ಉಳಿದಂತೆ ಮಂಡ್ಯದಲ್ಲಿ 15, ಹಾಸನದಲ್ಲಿ 13, ಬಳ್ಳಾರಿಯಲ್ಲಿ 11, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 9, ಬೆಂಗಳೂರಿನಲ್ಲಿ7, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 6, ದಾವಣಗೆರೆಯಲ್ಲಿ 3, ಗದಗ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಎರಡು, ಮೈಸೂರಿನಲ್ಲಿ ಒಂದು ಕೇಸ್ ಪತ್ತೆಯಾಗಿದೆ.
ದೇಶದಲ್ಲಿ 1,12,442 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 1,12,442 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,438 ಮಂದಿ ಮೃತಪಟ್ಟಿದ್ದಾರೆ. 45,422 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 50,92,046 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,29,768 ಜನರು ಮೃತಪಟ್ಟಿದ್ದಾರೆ. 20,26,199 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country