Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯ

ಜುಲೈ 2- ರಾಜಧಾನಿಯಲ್ಲಿ ಕೊರೊನಾ ರೌದ್ರನರ್ತನ, ರಾಜ್ಯಲ್ಲಿ 1,502 ಹೊಸ ಕೇಸು ಪತ್ತೆ, 19 ಮಂದಿ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 889 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,502 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 18,016ಕ್ಕೆ ಏರಿಕೆಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು 19 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 276ಕ್ಕೆ  (ಅನ್ಯಕಾರಣಕ್ಕೆ 4 ಮಂದಿ ಸೇರಿ) ಏರಿಕೆಯಾಗಿದೆ. ಇನ್ನು ಐಸಿಯುನಲ್ಲಿ 161 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು 18,016ರಲ್ಲಿ 9,406 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು  ರಾಜ್ಯದಲ್ಲಿ 19 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳ ತಲಾ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿ ತಲಾ ಒಂದು  ಪ್ರಕರಣ ಬೆಳಕಿಗೆ ಬಂದಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...