NEWSರಾಜಕೀಯ

ಜುಲೈ 3- ರಾಜ್ಯದಲ್ಲಿ ಕೊರೊನಾ ಮಹಾಸ್ಫೋಟಕ್ಕೆ ಜನ ತತ್ತರ, 1694 ಹೊಸ ಸೋಂಕು ದೃಢ, 21 ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, ಈ ಹಿಂದಿನಕ್ಕಿಂತಲು ಇಂದು ಅಂದರೆ 994 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 1,694 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 19,710 ಕ್ಕೆ ಏರಿಕೆಯಾಗಿದೆ.

ಇಂದು 21 ಜನ ಕೊರೊನಾಗೆ ಬಲಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 297ಕ್ಕೆ  (ಅನ್ಯಕಾರಣಕ್ಕೆ 4 ಮಂದಿ ಸೇರಿ) ಏರಿಕೆಯಾಗಿದೆ. ಇನ್ನು ಐಸಿಯುನಲ್ಲಿ 201 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಒಟ್ಟು 19,710ರಲ್ಲಿ 10608 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 471 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  ಈವರೆಗೆ ರಾಜ್ಯದಲ್ಲಿ 8805 ಮಂದಿ ಗುಣಮುಖರಾಗಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇಂದು  ರಾಜ್ಯದಲ್ಲಿ 21 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 994, ದಕ್ಷಿಣ ಕನ್ನಡ 97, ಬಳ್ಳಾರಿ 97, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35,  ಕಲಬುರಗಿ 72, ಬೀದರ್ 28, ತುಮಕೂರು 57,  ಶಿವಮೊಗ್ಗ 23, ಮಂಡ್ಯ 33, ವಿಜಯಪುರ 4, ರಾಮನಗರ 10, ಉತ್ತರ ಕನ್ನಡ 5, ಹಾಸನ 13, ಉಡುಪಿ 16, ಕೋಲಾರ 11, ರಾಯಚೂರು 7, ಬಾಗಲಕೋಟೆ 8, ದಾವಣಗೆರೆ 5, ಯಾದಗಿರಿ 14, ಬೆಳಗಾವಿ 13, ಕೊಡಗು 16,  ಹಾವೇರಿ 1, ಕೊಪ್ಪಳ  4, ಚಿತ್ರದುರ್ಗ 3, ಗದಗ 19, ಚಿಕ್ಕಬಳ್ಳಾಪುರ 3, ಚಾಮರಾಜನಗರ 24 ಪ್ರಕರಣ ಬೆಳಕಿಗೆ ಬಂದಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು