Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 22- ಬೆಂಗಳೂರಿನಲ್ಲಿ 126 ಹೊಸ ಪ್ರಕರಣ, ರಾಜ್ಯದಲ್ಲಿ 249 ಮಂದಿಗೆ ಸೋಂಕು ದೃಢ, ಐವರು ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 249 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  9,399ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 5  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 146ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

24 ಗಂಟೆಗಳಲ್ಲಿ ರಾಜ್ಯದಲ್ಲಿ 111 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 5,730 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,523 ಸಕ್ರಿಯ ಪ್ರಕರಣಗಳಿವೆ. ಇಂದು ಕಂಡುಬಂದಿರುವ 249 ಹೊಸ ಪ್ರಕರಣಗಳಲ್ಲಿ 50 ಮಂದಿ ಹೊರರಾಜ್ಯ ಮತ್ತು 11ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ಬೆಂಗಳೂರು ನಗರ 126 ಸೇರಿ ಒಟ್ಟು 249 ಹೊಸ ಕೊರೊನಾ ಪಾಸಿಟಿವ್‌ ಪ್ರಕರಣಗಳು ಇಂದು ದಾಖಲಾಗಿವೆ. ಇನ್ನು ಕೋವಿಡ್‌-19ಗೆ ಐದು ಮಂದಿ ಬಲಿಯಾಗಿದ್ದು, ಅದರಲ್ಲಿ ಮೂವರು ಬೆಂಗಳೂರು ನಗರ, ಒಬ್ಬರು ರಾಮನಗರ ಇನ್ನೊಬ್ಬರು ಬಳ್ಳಾರಿ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಸಂಜೆಯ ಬುಲೆಟಿನ್‌ನಲ್ಲಿ ತಿಳಿಸಿದೆ.

ದೇಶದಲ್ಲಿ 426,910 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 426,910 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 13,703 ಮಂದಿ ಮೃತಪಟ್ಟಿದ್ದಾರೆ. 237,252 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 9,079,104 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 471,257 ಜನರು ಮೃತಪಟ್ಟಿದ್ದಾರೆ 4,861,834 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ