Please assign a menu to the primary menu location under menu

NEWSನಮ್ಮಜಿಲ್ಲೆ

ಕೊರೊನಾಗೆ ಬೆಂಗಳೂರಿನಲ್ಲಿ ಮೂರು ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಅಟ್ಟಹಾಸ ನಗರದಲ್ಲಿ ಮುಂದುವರಿದಿದ್ದು, ಭಾನುವಾರ ಮಧ್ಯಾಹ್ನದ ವೇಳೆಗೆ ಮೂವರು ಮೃತಪಟ್ಟಿದ್ದಾರೆ.

ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದ 85 ವರ್ಷ ಮತ್ತು 65 ವರ್ಷದ ವೃದ್ಧೆಯರಿಬ್ಬರು ಮತ್ತು 39 ವರ್ಷದ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 92ಕ್ಕೆ ಏರಿಕೆ ಆಗಿದೆ.

ಜ್ವರ, ನೆಗಡಿ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಈ ಮೂವರನ್ನು ಕೋವಿಡ್‌ ವಾರ್ಡ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತಪಡುತ್ತಿರುವವರ ಪ್ರಮಾಣದಲ್ಲೂ ಏರಿಕೆ ಆಗುತ್ತಿದೆ. ಇದರಿಂದ ನಾಗರಿಕರು ಆತಂಕಕ್ಕೆ ಒಳಗಾಗಿದ್ದಾರೆ.

Leave a Reply

error: Content is protected !!
LATEST
BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲಿದ್ದರೂ ಓಕೆ- ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ