NEWSನಮ್ಮಜಿಲ್ಲೆ

ಕೊರೊನಾಗೆ ಬೆಂಗಳೂರಿನಲ್ಲಿ ಮೂರು ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಅಟ್ಟಹಾಸ ನಗರದಲ್ಲಿ ಮುಂದುವರಿದಿದ್ದು, ಭಾನುವಾರ ಮಧ್ಯಾಹ್ನದ ವೇಳೆಗೆ ಮೂವರು ಮೃತಪಟ್ಟಿದ್ದಾರೆ.

ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದ 85 ವರ್ಷ ಮತ್ತು 65 ವರ್ಷದ ವೃದ್ಧೆಯರಿಬ್ಬರು ಮತ್ತು 39 ವರ್ಷದ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 92ಕ್ಕೆ ಏರಿಕೆ ಆಗಿದೆ.

ಜ್ವರ, ನೆಗಡಿ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಈ ಮೂವರನ್ನು ಕೋವಿಡ್‌ ವಾರ್ಡ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತಪಡುತ್ತಿರುವವರ ಪ್ರಮಾಣದಲ್ಲೂ ಏರಿಕೆ ಆಗುತ್ತಿದೆ. ಇದರಿಂದ ನಾಗರಿಕರು ಆತಂಕಕ್ಕೆ ಒಳಗಾಗಿದ್ದಾರೆ.

Leave a Reply