NEWSದೇಶ-ವಿದೇಶನಮ್ಮರಾಜ್ಯ

ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ; ರಾಜ್ಯದಲ್ಲಿ 453 ಸೋಂಕು, 5 ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 453 ಮಂದಿ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ  9,150ಕ್ಕೆ ಏರಿಕೆಯಾಗಿದೆ.

ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು  ಇಂದು ಕೂಡ 5  ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 141ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

24 ಗಂಟೆಗಳಲ್ಲಿ ರಾಜ್ಯದಲ್ಲಿ 225 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 5,618 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 3,391 ಸಕ್ರಿಯ ಪ್ರಕರಣಗಳಿವೆ. ಇಂದು ಕಂಡುಬಂದಿರುವ 453 ಹೊಸ ಪ್ರಕರಣಗಳಲ್ಲಿ 69 ಮಂದಿ ಹೊರರಾಜ್ಯ ಮತ್ತು 5 ಮಂದಿ ಅಂತಾರಾಷ್ಟ್ರ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 7, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ 3, ಚಿಕ್ಕಬಳ್ಳಾಪುರ 3, ಹಾವೇರಿ 3, ರಾಯಚೂರು 2, ಶಿವಮೊಗ್ಗ 2, ರಾಮನಗರ 2 ಮತ್ತು ಚಿಕ್ಕಮಗಳೂರಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.

ಇಂದು ಕೊರೊನಾದಿಂದ ಗುಣಮುಖರಾಗಿ 225 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 5,618 ಗುಣಮುಖವಾಗಿದ್ದಾರೆ. 9,150 ಪ್ರಕರಣಗಳ ಪೈಕಿ 3,391 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಐವರು ಸಾವು

1. ರೋಗಿ 6,553: ಬೆಂಗಳೂರಿನ 53 ವರ್ಷದ ಮಹಿಳೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 10ರಂದು ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ.

2. ರೋಗಿ 8,872: ಬೆಂಗಳೂರಿನ 62 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 16ರಂದು ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಜೂನ್ 16ರಂದು ನಿಧನರಾಗಿದ್ದಾರೆ.

ರೋಗಿ 8,880: ಬೆಂಗಳೂರಿನ 55 ವರ್ಷದ ಪುರುಷ. ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಜೂನ್ 18ರಂದು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜೂನ್ 20ರಂದು ನಿಧನರಾಗಿದ್ದಾರೆ.

4. ರೋಗಿ 9,149: ಬೀದರ್ ಜಿಲ್ಲೆಯ 70 ವರ್ಷದ ಪುರುಷ. ಕಂಟೈನ್‍ಮೆಂಟ್ ಝೋನ್ ಸಂಪರ್ಕ ಹೊಂದಿದ್ದು ಜೂನ್ 18 ರಂದು ನಿಧನರಾಗಿದ್ದಾರೆ.

5. ರೋಗಿ 9,150: ಬೀದರ್ ನಗರದ 46 ವರ್ಷದ ಪುರುಷ. ಸೋಂಕಿನ ಮೂಲ ಪತ್ತೆಯಾಗಿಲ್ಲ. ಜೂನ್ 18ರಂದು ನಿಧನರಾಗಿದ್ದಾರೆ.

ದೇಶದಲ್ಲಿ 415,624 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 415,624  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 13,347 ಮಂದಿ ಮೃತಪಟ್ಟಿದ್ದಾರೆ. 230,586 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 8,955,132  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 467,484 ಜನರು ಮೃತಪಟ್ಟಿದ್ದಾರೆ 4,765,937 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ