ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇದಿನ 109 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 1256 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ 38 ಮಂದಿ ಮೃತಪಟ್ಟಿದ್ದು, 530 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದು ಬೆಳಗ್ಗೆ 84 ಹಾಗೂ ಸಂಜೆ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಮಂಡ್ಯದಲ್ಲಿ 17 ಹಾಗೂ ಬೆಂಗಳೂರು ನಗರದಲ್ಲಿ 24 , ಶಿವಮೊಗ್ಗದಲ್ಲಿ 10, ಹಾಸನದಲ್ಲಿ 4, ರಾಯಚೂರಿನಲ್ಲಿ 6, ಕೊಪ್ಪಳದಲ್ಲಿ 3, ವಿಜಯಪುರದಲ್ಲಿ 5, ಗದಗದಲ್ಲಿ 5, ಮೈಸೂರು, ಬಳ್ಳಾರಿ , ದಾವಣಗೆರೆ, ಕೊಡಗು ಮತ್ತು ಬೀದರ್ ನಲ್ಲಿ ತಲಾ 1, ದಕ್ಷಿಣ ಕನ್ನಡ 2, ಯಾದಗಿರಿಯಲ್ಲಿ 5, ಕಲಬುರಗಿಯಲ್ಲಿ 10, ಉತ್ತರ ಕನ್ನಡದಲ್ಲಿ 9, ಬೆಳಗಾವಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಪತ್ತೆಯಾಗಿರುವ ಸೋಂಕಿತ ಪ್ರಕರಣದಲ್ಲಿ ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಿನಲ್ಲಿ ಕೂಡ ಸೋಂಕು ಇರುವುದು ದೃಢಪಟ್ಟಿದೆ. ಇತ್ತೀಚೆಗೆ ವರದಿಯಾಗುತ್ತಿರುವ ಸೋಂಕು ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಳಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail