NEWSನಮ್ಮರಾಜ್ಯರಾಜಕೀಯ

ಆಸ್ಪತ್ರೆಗಳಲ್ಲಿ ಬೆಡ್‌ ಇಲ್ಲ: ಸಿಎಂ ಮನೆ ಬಳಿ ಕೊರೊನಾ ಸೋಂಕಿತನ ನರಳಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿತರೊಬ್ಬರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಎಲ್ಲಿಯೂ ಬೆಡ್‌ ಸಿಗದೆ ಕೊನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಮನೆಮುಂದೆ ಬಂದು ನನ್ನನ್ನು ಆಸ್ಪತ್ರಗೆ ಸೇರಿಸಿ ಇಲ್ಲ ಇಲ್ಲೇ ಸಾಯುತ್ತೇನೆ ಎಂದು ನರಳಾಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಕೊರೊನಾ ಸೋಂಕಿತರಿಗೆ ಸರಿಯಾದ ವ್ಯವಸ್ಥೆ ಮಾಡದೆ ಎಲ್ಲವನ್ನೂ ಮಾಡಿದ್ದೇವೆ ಎಂದು ಬೊಗಳೆಯನ್ನು ಇನ್ನೂ ಬಿಡುತ್ತಿರುವುದು ಏಕೆ ಎಂದು ಅರ್ಥವಾಗುತ್ತಿಲ್ಲ.

ಇನ್ನು ಸಿಎಂ ಮನೆಮುಂದಕ್ಕೆ ಆಟೋದಲ್ಲಿ ಹೋದ ಕೊರೊನಾ ಪೀಡಿತ ವ್ಯಕ್ತಿ, ಇದಕ್ಕೂ ಮೊದಲು ಬೆಂಗಳೂರಿನ ಹಲವಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಕೆಲ ಆಸ್ಪತ್ರೆಗಳು ಬೆಡ್‌ ಖಾಲಿ ಇಲ್ಲ ಎಂದು ಹೇಳಿದರೆ ಇನ್ನು ಕೆಲವು ಆಸ್ಪತ್ರೆಯವರು ಬಿಬಿಎಂಪಿ ಅಧಿಕಾರಿಗಳಿಂದ ಕೋವಿಡ್‌ ಇರುವ ಬಗ್ಗೆ ಒಂದು ಪತ್ರ ತೆಗೆದುಕೊಂಡು ಬನ್ನಿ ಎಂದು ಹೇಳಿ ಕಳುಹಿಸಿವೆ.

ಹೀಗೆ ಎಲ್ಲಕಡೆ ಅಲೆದಾಡಿ ಸುಸ್ತಾತ ಬಳಿಕ ಕೊನೆಗೆ ಬೇರೆ ದಾರಿ ಕಾಣದೆ ಸಿಎಂ ಮನೆಮುಂದೆ ಬಂದು ಕುಳಿತಿದ್ದಾರೆ. ಇದನ್ನು ಕಂಡ ಸಿಎಂ ಮನೆಯ ಕಾವಲಿನಲ್ಲಿದ್ದ ಸಿಬ್ಬಂದಿ ಕೊರೊನಾ ಸೋಂಕಿತ ವ್ಯಕ್ತಿಯನ್ನು ಕೊನೆಗೆ ಬೋರಿಂಗ್‌ ಆಸ್ಪತ್ರೆಗೆ ಸೇರಿಸಿದ್ದಾರೆ.

ಆದರೆ ಆ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಇಲ್ಲದೆ ರೋಗಿ ಇನ್ನಷ್ಟು ನರಳುತ್ತಿದ್ದಾನೆ. ಈರೀತಿಯ ಬೇಜವಾಬ್ದಾರಿ ಸರ್ಕಾರದ ನಡೆಯಿಂದ ಜನರು ಸೇಸತ್ತು ಹೋಗಿದ್ದು, ಇದು ಹೀಗೆಯೇ ಮುಂದುವರಿದರೆ ರೊಚ್ಚಿಗೆಳುವ ಕಾಲ ದೂರವಿಲ್ಲ ಎಂಬುದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್