ಬೆಂಗಳೂರು: ಕೊರೊನಾ ಸೋಂಕಿನಿಂದ ಮಂಗಳವಾರ ಮೃತಪಟ್ಟಿದ್ದ ಆರು ಮಂದಿಯ ಅಂತ್ಯ ಕ್ರಿಯೆಯನ್ನು ಅಮಾನುಷವಾಗಿ ಮಾಡಿದ ಘಟನೆಗೆ ಸಂಬಂಧಿಸಿದಂತೆ 6 ಮಂದಿ ನೌಕರರನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ವಿಧಾನಸೌಧಲ್ಲಿ ಮಾತನಾಡಿದ ಅವರು, ನಾವು ಇಂಥ ಅಮಾನವೀಯ ನಡೆಯನ್ನು ಖಂಡಿಸುತ್ತೇವೆ. ಮುಂದೆ ಈರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ನೀಡುವ ಸಲುವಾಗಿ 6ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಹೇಳಿದರು.
ಈ ವೇಳೆ ಉಪಸ್ಥಿತರಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಬಳ್ಳಾರಿಯ ಜಿಲ್ಲಾಧಿಕಾರಿ ನೌಕರರು ಅಂತ್ಯಕ್ರಿಯೆ ವೇಳೆ ನಡೆದುಕೊಂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿ ಬೇಸರತ್ ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದರು.
ಇನ್ನು ಮುಂದೆ ಇಂಥ ಘಟನೆ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಇನ್ನು ದಾವಣಗೆರೆ ಮತ್ತು ಯಾದಗಿರಿಯಲ್ಲೂ ಈರೀತಿ ನಡೆದುಕೊಂಡಿದ್ದು ಅವರ ವಿರುದ್ಧವು ಕ್ರಮ ಜರುಗಿಸುವ ಬಗ್ಗೆ ಸಚಿವರು ತಿಳಿಸಿದ್ದಾರೆ.