NEWSನಮ್ಮರಾಜ್ಯ

ರಾಜಧಾನಿಯಲ್ಲಿ ಎಎಸ್‌ಐ ಬಲಿ ಪಡೆದ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಸಂಚಾರ ಠಾಣೆ ಎಎಸ್‌ಐ ಒಬ್ಬರು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ.

ಮೃತರು ಬೆಂಗಳೂರು ವಿ.ವಿ.ಪುರ ಸಂಚಾರಿ ಠಾಣೆ ಎಎಸ್‌ಐ ಎಂದು ತಿಳಿದುಬಂದಿದೆ. 15 ದಿನಗಳಲ್ಲಿ ನಿವೃತ್ತರಾಗಲಿದ್ದ ಅವರು, ಥಣಿಸಂದ್ರದ ಮನೆಯಲ್ಲಿ ದಿಢೀರನೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದಾಗ ಕೊರೊನಾ ಪಾಸಿಟಿವ್ ಇರುವುದು ಅವರಲ್ಲಿ ದೃಢಪಟ್ಟಿದೆ.

ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ಇದೆ. ವಿಷಯ ತಿಳಿದ ತಕ್ಷಣ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಇಡೀ ಠಾಣೆಯನ್ನು ಸೀಲ್ ಡೌನ್‌ ಮಾಡಿ ಸ್ಯಾನಿಟೈಸರ್ ಮಾಡುತ್ತಿದ್ದಾರೆ. ಈ ಠಾಣೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಸರ್ಕಾರದ ಸುತ್ತೋಲೆಯಂತೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ