NEWSನಮ್ಮರಾಜ್ಯ

ಮೇ 16- ರಾಜ್ಯದಲ್ಲಿ 23 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಶನಿವಾರ  ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ 14 ಸೇರಿದಂತೆ ಒಟ್ಟು 23 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.  ಈ ಮೂಲಕ  ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 1079ಕ್ಕೆ ಏರಿದ್ದು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆ ಆಗಿದೆ.

ಹಾಸನದಲ್ಲಿ ಮೂರು, ಮಂಡ್ಯ, ಉಡುಪಿ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಧಾರವಾಡದಲ್ಲಿ ತಲಾ ಒಂದು ಸೋಂಕಿತ ಪ್ರಕರಣ ದಾಖಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ರಾಜ್ಯದಲ್ಲಿ ಒಟ್ಟು 1079 ಕೊರೊನಾ ಪಾಸಿಟಿವ್‌ ಪ್ರಕರಣಗಳು ಇದ್ದು, ಇದರಲ್ಲಿ 494 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇನ್ನು 548 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 36 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 85,940 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 85,940 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,753 ಮಂದಿ ಮೃತಪಟ್ಟಿದ್ದಾರೆ.30,258 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 46,29,886 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,08,677 ಜನರು ಮೃತಪಟ್ಟಿದ್ದಾರೆ. 17,61,082 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply