ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗ ಮುಂದುವರಿಸಿದ್ದು ಗುರುವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. (ಅನ್ಯಕಾರಣದಿಂದ ಇಬ್ಬರು ಮೃತ).
ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸೇರಿ 204 ಮಂದಿಗೆ ಕೊರೊನಾ ಸೋಂಕು ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 114 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 2,976ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 3,191 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಪತ್ತೆಯಾದ 204 ಸೋಂಕಿತರಲ್ಲಿ 157 ಜನ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಯಾದಗಿರಿಯಲ್ಲಿ 66, ಉಡುಪಿಯಲ್ಲಿ 22, ಬೆಂಗಳೂರು ನಗರದಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 15, ಬೀದರ್ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರು, ರಾಮನಗರದಲ್ಲಿ ತಲಾ 5, ವಿಜಯಪುರದಲ್ಲಿ 4, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ತಲಾ 3, ದಕ್ಷಿಣ ಕನ್ನಡ, ಹಾಸನ, ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಂಗಳೂರು ನಗರದ 35 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ದೀರ್ಘಕಾಲದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಗರದ 60 ವರ್ಷದ ವ್ಯಕ್ತಿ ಜತೆಗೆ, ರಾಯಚೂರಿನ 28 ವರ್ಷದ ಮಹಿಳೆ ಕೂಡ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಬೀದರ್ ಜಿಲ್ಲೆಗೆ ಪ್ರಯಾಣ ಬೆಳೆಸಿದ ಹಿನ್ನೆಲೆ ಹೊಂದಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ದೇಶದಲ್ಲಿ 297,205 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 297,205 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 8,477 ಮಂದಿ ಮೃತಪಟ್ಟಿದ್ದಾರೆ. 146,238 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,535,210 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 421,158 ಜನರು ಮೃತಪಟ್ಟಿದ್ದಾರೆ 3,819,525 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail