ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 337 ಮಂದಿಗೆ ಹೊಸದಾಗಿ ಸೇರ್ಪಡೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,281ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳಿಂದ ಕೊರೊನಾಗೆ ಮೃತಪಡುತ್ತಿರುವ ಸಂಖ್ಯೆ ಏರುತ್ತಲೇ ಇದ್ದು ಇಂದು ಕೂಡ 10 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 128ಕ್ಕೆ ಏರಿಕೆ ಆಗಿದೆ. (ಅನ್ಯಕಾರಣಕ್ಕೆ ನಾಲ್ವರು ಸೇರಿ).
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇಂದು 230 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು 8,281 ಸೋಂಕಿತರಲ್ಲಿ 2,943 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 4,983 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪತ್ತೆಯಾದ 210 ಸೋಂಕಿತರ ಪೈಕಿ 93 ಮಂದಿ ಅಂತರಾಜ್ಯ ಹಾಗೂ 11 ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇನ್ನು ಐಸಿಯುನಲ್ಲಿ 78 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 138, ಕಲಬುರಗಿಯಲ್ಲಿ 52, ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆಯಲ್ಲಿ 12, ಉಡುಪಿಯಲ್ಲಿ 11, ಬೀದರ್ ನಲ್ಲಿ 10, ಮೈಸೂರು, ಕೊಪ್ಪಳದಲ್ಲಿ ತಲಾ 6, ಯಾದಗಿರಿ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ಮಂಡ್ಯ, ಧಾರವಾಡ,ಚಿಕ್ಕಬಳ್ಳಾಪುರ, ಬಾಗಲಕೋಟೆ, ರಾಮನಗರದಲ್ಲಿ ತಲಾ 3, ಚಿಕ್ಕಮಗಳೂರು, ತುಮಕೂರಿನಲ್ಲಿ 2, ಬೆಳಗಾವಿ, ಉತ್ತರಕನ್ನಡ, ಶಿವಮೊಗ್ಗದಲ್ಲಿ ತಲಾ ಒಂದೊಂದು ಪ್ರಕರಣಗಳು ವರದಿಯಾಗಿವೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಂಗಳೂರು ಒಂದರಲ್ಲೇ ಏಳು ಮಂದಿ ಮೃತಪಟ್ಟಿದ್ದಾರೆ. 65 ವರ್ಷದ ಮಹಿಳೆ, 78 , 72, 58, 50, 54, 69 ವರ್ಷದ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ವಿಜಯಪುರದ 66 ವರ್ಷದ ಮಹಿಳೆ, ಬೀದರ್ ನ 45 ಮತ್ತು 70 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ
ದೇಶದಲ್ಲಿ 382,497 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 382,497 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ 12,616 ಮಂದಿ ಮೃತಪಟ್ಟಿದ್ದಾರೆ. 205,844 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 8,616,990 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 457,080 ಜನರು ಮೃತಪಟ್ಟಿದ್ದಾರೆ 4,563,307 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail