NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ: ಉಡುಪಿಯೊಂದರಲ್ಲೇ 150 ಪಾಸಿಟಿವ್‌

ಇಂದು ರಾಜ್ಯದಲ್ಲಿ 388 ಕೋವಿಡ್‌-19 ಸೋಂಕಿತರು ಪತ್ತೆ l ದಿನದಿಂದ ದಿನಕ್ಕೆ ಬೆಚ್ಚಿಬೀಳಿಸುವ ವರದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ಇಂದೂ ಕೂಡ ರಣಕೇಕೆ ಹಾಕಿದ್ದು, 388 ಹೊಸ ಪ್ರಕರಣಗಳು ದೃಢಪಟ್ಟಿದ್ದು  ಈ ಮೂಲಕ ರಾಜ್ಯದಲ್ಲಿ 3,796 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಇಂದು  ಉಡುಪಿಯಲ್ಲಿ 150 ಕೊರೊನಾ  ಸೋಂಕು ತಗುಲಿದ್ದು ರಾಜ್ಯದಲ್ಲಿಯೇ ಉಡುಪಿ ಕೊರೊನಾದಲ್ಲಿ ಮೊದಲನೇ ಸ್ಥಾನಕ್ಕೆ ಏರಿದೆ.  ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 54 ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ದೃಢಪಟ್ಟಿರುವ 388  ಪ್ರಕರಣಗಳ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ 100, ಬೆಳಗಾವಿಯಲ್ಲಿ 51, ರಾಯಚೂರು 16, ಬೆಂಗಳೂರು 12, ಬೀದರ್‌ 10, ಬಾಗಲಕೋಟೆ ಮತ್ತು ಹಾಸನದಲ್ಲಿ ತಲಾ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ ಮತ್ತು ವಿಜಯಪುರ ತಲಾ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಧಾರವಾಡ ತಲಾ 2, ಕೋಲಾರ ಮತ್ತು ಹಾವೇರಿಯಲ್ಲಿ ತಲಾ ಒಂದೊಂದು ಸೋಂಕಿತ ಪ್ರಕರಣ ದೃಢಪಟ್ಟಿದೆ ಎಂದು   ಸಂಜೆ ಆರೋಗ್ಯ ಇಲಾಖೆ ನೀಡಿದ ಬುಲೆಟಿನ್‌ನಲ್ಲಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇದುವರೆಗೆ 1403 ಮಂದಿ ಗುಣಮುಖರಾಗಿ  ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  2339 ಮಂದಿಯಲ್ಲಿ  ಸಕ್ರಿಯವಾಗಿದೆ. ಪ್ರಸ್ತುತ 15 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 201,009 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 201,009  ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 5,628  ಮಂದಿ ಮೃತಪಟ್ಟಿದ್ದಾರೆ. 96,534 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,407,648 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 378,290 ಜನರು ಮೃತಪಟ್ಟಿದ್ದಾರೆ 2,934,619  ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

 

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ