Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಜೂನ್‌ 14- ರಾಜ್ಯದಲ್ಲಿ ಕೊರೊನಾಗೆ 5 ಮಂದಿ ಬಲಿ, 176 ಹೊಸ ಸೋಂಕಿತರು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು ಭಾನುವಾರ  ಮಹಾಮಾರಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 89 ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಮೂವರು ಮೃತ).

ಇಂದು 176  ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು 176  ಸೋಂಕಿತರಲ್ಲಿ 6 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.

ಇಂದು ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ್‌ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ ಮತ್ತು ದಕ್ಷಿಣ ಕನ್ನಡ ತಲಾ 5, ಬಾಗಲಕೋಟೆ 4, ರಾಮನಗರ 3, ರಾಯಚೂರು ಮತ್ತು ಶಿವಮೊಗ್ಗದಲ್ಲಿ ತಲಾ 2, ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಬೆಳಕಿಗೆ ಬಂದಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ      https://play.google.com/store/apps/detail

 ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 24 ಗಂಟೆಯೊಳಗೆ 5 ಮಂದಿ  ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 312  ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 3955 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳಿದ್ದು, 16 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 322,777 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 322,777 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 9,206 ಮಂದಿ ಮೃತಪಟ್ಟಿದ್ದಾರೆ. 163,019 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,905,198 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 432,962 ಜನರು ಮೃತಪಟ್ಟಿದ್ದಾರೆ 4,062,659 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ     https://play.google.com/store/apps/detail

 

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ