ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾನುವಾರ ಮಧ್ಯಾಹ್ನದ ವೇಳೆಗೆ ಮಂಡ್ಯದಲ್ಲಿ 22 ಸೇರಿದಂತೆ ಒಟ್ಟು 54 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1146ಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆ ಆಗಿದೆ.
ಕಲಬುರಗಿಯಲ್ಲಿ 11, ಹಾಸನದಲ್ಲಿ 6, ಧಾರವಾಡದಲ್ಲಿ 4, ಶಿವಮೊಗ್ಗ, ಕೋಲಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಎರಡು, ಯಾದಗಿರಿಯಲ್ಲಿ ಮೂರು, ಉಡುಪಿ, ವಿಜಯಪುರದಲ್ಲಿ ತಲಾ ಒಂದು ಸೋಂಕಿತ ಪ್ರಕರಣ ದಾಖಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ರಾಜ್ಯದಲ್ಲಿ ಒಟ್ಟು 1,146 ಕೊರೊನಾ ಪಾಸಿಟಿವ್ ಪ್ರಕರಣಗಳು ಇದ್ದು, ಇದರಲ್ಲಿ 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇನ್ನು 611 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 38 ಮಂದಿ ಈವರೆಗೆ ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 90,927 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 90,927 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,872 ಮಂದಿ ಮೃತಪಟ್ಟಿದ್ದಾರೆ.34,224 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 37,34,378 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 3,13,459 ಜನರು ಮೃತಪಟ್ಟಿದ್ದಾರೆ. 18,18,236 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail