Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

ಜೂನ್‌12- ರಾಜ್ಯದಲ್ಲಿ ಕೊರೊನಾಗೆ ಏಳು ಮಂದಿ ಬಲಿ, 271 ಜನರಲ್ಲಿ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು, ಶುಕ್ರವಾರ ಮಹಾಮಾರಿಗೆ ಮತ್ತೆ ಏಳು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 81ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಇಬ್ಬರು ಮೃತ).

ಇಂದು 271 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. ಇನ್ನು 271 ಸೋಂಕಿತರಲ್ಲಿ 91 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, 14 ಮಂದಿ ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

 ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ನಾಲ್ವರು, ಕಲಬುರಗಿಯಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಇಂದು 464 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 3440ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2995 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 300,821 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 300,821 4ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 8,531 ಮಂದಿ ಮೃತಪಟ್ಟಿದ್ದಾರೆ. 149,035 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,633,217  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 424,495 ಜನರು ಮೃತಪಟ್ಟಿದ್ದಾರೆ 3,865,372 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ