ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತಿಗೆ ತಪ್ಪುವುದಿಲ್ಲ ಮತ್ತು ಕೆಳಹಂತದ ರಾಜಕಾರಣ ಮಾಡುವುದಿಲ್ಲ ಎಂದು ಅಂದುಕೊಂಡಿದ್ದೆ ಆದರೆ ನನ್ನ ಪದಗ್ರಹಣ ವಿಚಾರದಲ್ಲಿ ಆ ನಂಬಿಕೆ ಹುಸಿಯಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಪದಗ್ರಹಣ ಸಮಾರಂಭಕ್ಕೆ ಅನುಮತಿ ಕೊಡುವುದನ್ನು ಸರ್ಕಾರ ನಿರಾಕರಿಸಿದ್ದು, ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಸರ್ಕಾರ ಒಪ್ಪಿಗೆ ಕೊಟ್ಟ ಮೇಲಷ್ಟೇ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ ನಾವು ಇದನ್ನು ನಿಲ್ಲಿಸುವುದಿಲ್ಲ ಈಗ ಯೋಜಿಸಿರುವಂತೆಯೇ ಸಮಾರಂಭವನ್ನು ಮಾಡಲು ದಿನಾಂಕವನ್ನು ಮುಂದೆ ತಿಳಿಸುತ್ತೇವೆ ಎಂದು ವಿವರಿಸಿದರು.
ರಾಜ್ಯ ಸರ್ಕಾರದ ಬಹುತೇಕ ಸಚಿವರು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವ ಕ್ರಮವೂ ಇಲ್ಲ. ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೆ ಕೊಡುವುದಿಲ್ಲ. ಅಂದರೆ ಸರ್ಕಾರದ ಈ ದ್ವಂದ್ವ ನಿಲುವು ಅರ್ಥವಾಗುತ್ತಿಲ್ಲ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಿರುವುದರ ಹಿಂದೆ ರಾಜಕೀಯ ದುರುದ್ದೇಶ ಕಾಣುತ್ತಿದೆ ನಾವು ಕಾನೂನನ್ನು ಗೌರವಿಸುತ್ತೇವೆ. ಹೀಗಾಗಿ ಅವರು ಅನುಮತಿ ಕೊಟ್ಟ ನಂತರವೇ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಹೇಳಿದರು.
ನಾನು ವ್ಯರ್ಥವಾಗಿ ಮನೆಯಲ್ಲಿ ಕೂರುವುದಿಲ್ಲ ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಪ್ರವಾಸ ಮಾಡುತ್ತೇನೆ ಕೊರೊನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಕಷ್ಟವನ್ನು ಆಲಿಸುತ್ತೇನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ಯಾಕೇಜ್ ಅರ್ಹರಿಗೆ ತಲುಪಿದೆಯೇ ಎಂದು ವಿವರಿಸಲು ಪ್ರವಾಸ ಕೈಗೊಳ್ಳಲಾಗುವುದು. ಜನರ ಕಷ್ಟಕ್ಕೆ ಸ್ಪಂದಿಸಿ ನಮ್ಮ ಪಕ್ಷದ ಎಲ್ಲ ನಾಯಕರು ಈ ಪ್ರವಾಸದಲ್ಲಿ ಭಾಗವಹಿಸುತ್ತಾರೆ. ಪಕ್ಷದ ಬಾವುಟ ಬಳಸುವುದಿಲ್ಲ ಎಂದು ತಿಳಿಸಿದರು.
ಬಿಜೆಪಿ ನಕಲು ಮಾಡಿದೆ
ಈಗ ಮಾಡುತ್ತಿರುವ ಆನ್ ಲೈನ್ ಕಾರ್ಯಕ್ರಮ ನಮ್ಮ ಚಿಂತೆಯಾಗಿತ್ತು. ಅದನ್ನು ಬಿಜೆಪಿ ನಕಲು ಮಾಡಿದೆ. ನಮಗೆ ಅನುಮತಿ ನಿರಾಕರಿಸಿ ಬಿಜೆಪಿ ವತಿಯಿಂದ ನಮ್ಮದೇ ರೀತಿಯ ವರ್ಚುವಲ್ ಕಾರ್ಯಕ್ರಮ ಮಾಡಲಾಗುತ್ತಿದೆ. ರಾಷ್ಟ್ರೀಯ ಪ್ರಕೃತಿ ವಿಕೋಪ ಕಾನೂನನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಡಿಕೆಶಿ ದೂರಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail