ಬೆಂಗಳೂರು: ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಒಪ್ಪಿಗೆ ಸೂಚಿಸಿದೆ.
ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿಕೆಶಿ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ನಮ್ಮದೇನೂ ಅಭ್ಯಂತರ ಇಲ್ಲ ಆದರೆ ಹೆಚ್ಚು ಜನ ಸಮಾರಂಭದಲ್ಲಿ ಸೇರಬಾರದು ಎಂದು ಹೇಳಿರುವುದಾಗಿ ತಿಳಿಸಿದರು.
ಡಿಕೆಶಿ ಅವರೊಂದಿಗೆ ನಿನ್ನೆ ದೂರವಾಣಿ ಮೂಲಕ ಮಾತನಾಡಿದ್ದು ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ಡಿಕೆಶಿ ಅವರು ಅದನ್ನು ಪಾಲಿಸುತ್ತೇನೆ ಎಂದು ಒಪ್ಪಿಕೊಂಡಿದ್ದಾರೆ ಹೀಗಾಗಿ ಅವರು ಯಾವಾಗ ಬೇಕಾದರು ಸಮಾರಂಭ ಆಯೋಜನೆ ಮಾಡಿಕೊಳ್ಳಬಹುದು ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail