NEWSನಮ್ಮರಾಜ್ಯರಾಜಕೀಯಶಿಕ್ಷಣ-

ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಕೊಡಬಹುದು ಎಂದು ತಜ್ಞರ ಸಮಿತಿ ಶಿಫಾರಸು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಮಹಾಮಾರಿ ರಾಜ್ಯದಲ್ಲಿ ತೀವ್ರ ಹೆಚ್ಚಾಗುತ್ತಿರುವ ಈ ಸಂಕಷ್ಟ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ಶಿಕ್ಷಣ ಮುಂದುವರಿಸುವ ಸಂಬಂಧ ಪ್ರೊ. ಎಂ.ಕೆ. ಶ್ರೀಧರ್ ಅಧ್ಯಕ್ಷತೆಯ ತಜ್ಞರ ಸಮಿತಿ ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ವರದಿ ಸ್ವೀಕರಿಸಿ ಸಕಾರಾತ್ಮಕ ಅಂಶಗಳನ್ನು ತಕ್ಷಣದಿಂದಲೇ ಜಾರಿಗೆ ತರುವುದಾಗಿ ಹೇಳಿಕೆ ನೀಡಿದರು.

3 ರಿಂದ 6 ವರ್ಷ ವಯೋಮಾನದ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಆಟ, ಕಥೆ, ಪ್ರಾಸ ಸೇರಿದ ನವೀನ ಚಟುವಟಿಕೆಗಳನ್ನು ಮಾತ್ರ ಪಾಲಕರ ಕಡ್ಡಾಯ ಉಪಸ್ಥಿತಿಯಲ್ಲಿ ನೇರ ಅಥವಾ ಮುದ್ರಿತ ಬೋಧನಾ ವಿಧಾನಗಳನ್ನು ವಾರಕ್ಕೆ ಮೂರು ದಿನ ಪ್ರತಿದಿನ ಒಂದು ಗಂಟೆ ಅವಧಿಯಂತೆ ಕಲಿಸಬಹುದು ಎಂದು ವರದಿಯಲ್ಲಿ ತಿಳಿಸಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಸಚಿವರು  ಮಾಹಿತಿ ನೀಡಿದರು.

ಅದೇ ರೀತಿ 1ರಿಂದ 2ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಆಟ, ಕಥೆಯ ರೂಪದ ನವೀನ ಚಟುವಟಿಕೆಗಳನ್ನು ಮಾತ್ರ ವಾರಕ್ಕೆ ಮೂರು ದಿನ ಪ್ರತಿದಿನ ಎರಡು ಅವಧಿಯ ಕಲಿಕೆಗೆ ಅವಕಾಶ ನೀಡಬಹುದು. 3ರಿಂದ 5ನೇ ತರಗತಿಗಳಿಗೆ ವಾರಕ್ಕೆ 5ದಿನ ಪ್ರತಿದಿನ 30 ನಿಮಿಷದ 2 ಅವಧಿಗಳನ್ನು ಆನ್ ಲೈನ್ ಬೋಧನೆ ಮಾಡಬಹುದೆಂದು ಸಮಿತಿ ಸಲಹೆ ಮಾಡಿದೆ.

ಪಠ್ಯಕ್ಕೆ ಪೂರಕ ಬೋಧನೆಯನ್ನು ಅಳವಡಿಸಿಕೊಳ್ಳಬಹುದು. 6ರಿಂದ 8ನೇ ತರಗತಿಗೆ 30ರಿಂದ 45 ನಿಮಿಷಗಳ ಗರಿಷ್ಠ 3 ಅವಧಿ ಹಾಗೂ 9-10ನೇ ತರಗತಿಗೆ 30-45 ನಿಮಿಷಗಳ ಪ್ರತಿದಿನದ ಗರಿಷ್ಠ 4 ಅವಧಿಗೆ ಪರ್ಯಾಯ ಕಲಿಕೆಯನ್ನು ಶಿಫಾರಸು ಮಾಡಿದೆ ಎಂದು ತಿಳಿಸಿದರು.

ಪ್ರೊ. ಎಂ.ಕೆ. ಶ್ರೀಧರ್, ಗುರುರಾಜ ಕರ್ಜಗಿ, ಪ್ರೊ. ವಿ.ಪಿ. ನಿರಂಜನಾರಾಧ್ಯ ಅವರಂತಹ ಹಿರಿಯ ಶಿಕ್ಷಣ ತಜ್ಞರ ನೇತೃತ್ವದ ಸಮಿತಿ ರಚನಾತ್ಮಕ ವರದಿ ನೀಡಿರುವುದು ನಮಗೆಲ್ಲ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ವರದಿಯ ಪೂರ್ಣಪಾಠವನ್ನು ಅಧ್ಯಯನ ಮಾಡಿ ಅದು ಸೂಚಿಸಿರುವ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡುವ ತೀರ್ಪಿಗನುಗುಣವಾಗಿ ನಿಯಮಗಳನ್ನು ಸಿದ್ಧಪಡಿಸಲಾಗುವುದೆಂದು ವಿವರಿಸಿದರು.

ಸರ್ಕಾರಿ ಶಾಲೆಗಳಲ್ಲಿ ಪರ್ಯಾಯ ಬೋಧನಾ ಕ್ರಮಗಳ ಕುರಿತಂತೆ ಇಷ್ಟರಲ್ಲಿಯೇ ದೂರದರ್ಶನ, ಆಕಾಶವಾಣಿ ಮೂಲಕ ಸೇತುಬಂಧ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದೆ. ಪ್ರತಿ ಶಿಕ್ಷಕರನ್ನು ಪ್ರತಿ ವಿದ್ಯಾರ್ಥಿಯೊಂದಿಗೆ ಮ್ಯಾಪಿಂಗ್ ಮಾಡಿ ಕಲಿಕೆಯನ್ನು ಅನುಪಾಲಿಸುವ ಸಮರ್ಥ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಮಿತಿಯ ಎಲ್ಲರ ಉದ್ದೇಶವೂ ಮಕ್ಕಳ ಹಿತವನ್ನು ಕಾಪಾಡುವುದಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಉತ್ತಮವಾದ ವರದಿಯನ್ನು ತಯಾರು ಮಾಡಿ ಸರ್ಕಾರಕ್ಕೆ ಸಲ್ಲಿಸಲು ಸಾಧ್ಯವಾಯಿತು ಎಂದು ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಶಿಕ್ಷಣ ತಜ್ಞ ಪ್ರೊ. ಎಂ.ಕೆ. ಶ್ರೀಧರ್ ಹೇಳಿದರು.

ಸಮಿತಿ ಸದಸ್ಯರಾದ ಹಿರಿಯ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, ಅಜೀಂ ಪ್ರೇಂಜಿ ಪ್ರತಿಷ್ಠಾನದ ಪ್ರತಿನಿಧಿ ಬಿ.ಎಸ್. ಹೃಷಿಕೇಶ್, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಅರ್ಲಿ ಚೈಲ್ಡ್‌ವುಡ್ ಅಸೋಷಿಯೇಷನ್ ರಾಜ್ಯ ಸಮಿತಿ ಸದಸ್ಯೆ ಪ್ರೀತಿವಿಕ್ರಂ, ಎಚ್.ಎನ್.ಗೋಪಾಲಕೃಷ್ಣ, ಎಂ.ಆರ್. ಮಾರುತಿ, ಸತ್ಯಮೂರ್ತಿ, ಕೃಷ್ಣಾಜಿ, ಮಮತಾ ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ