ಬೆಂಗಳೂರು: ಕರ್ನಾಟಕದಲ್ಲಿ ಇಂದು 248 ಮಂದಿಯಲ್ಲಿ ಸೋಂಕು ಹರಡುವ ಮೂಲಕ ಕೊರೊನಾ ಸೋಂಕು ತನ್ನ ಅಟ್ಟಹಾಸವನ್ನು ಮುಂದುವರಿಸಿದೆ.
ಈವರೆಗೆ ರಾಜ್ಯದಲ್ಲಿ 2,781 ಮಂದಿ ಈ ವಿಶ್ವಮಾರಿಯಿಂದ ಬಳಲುತ್ತಿದ್ದು, ಅದರಲ್ಲಿ ಈಗಾಗಲೇ 49 ಮಂದಿ ಮೃತಪಟ್ಟಿದ್ದಾರೆ. ಇನ್ನು 894 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ 1,837 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಇಂದು ರಾಜ್ಯದಲ್ಲಿ ಅತ್ಯಂತ ಹೆಚ್ಚು ಕೊರೊನಾ ಸೋಂಕಿತ ಜಿಲ್ಲೆಯಾಗಿ ರಾಯಚೂರು 62, ಯಾದಗಿರಿ 60, ಉಡುಪಿ 15, ಕಲಬುರಗಿ 61 ,ಬೆಂಗಳೂರು 12, ಬಳ್ಳಾರಿ 9, ಹಾಸನ, ದಾವಣಗೆರೆ ಮತ್ತು ವಿಜಯಪುರ ತಲಾ 4, ಮತ್ತು ಚಿಕ್ಕಮಗಳೂರು, ತುಮಕೂರು, ಮಂಡ್ಯ ಮತ್ತು ಮೈಸೂರು ತಲಾ 2, ಶಿವಮೊಗ್ಗ, ಚಿತ್ರದುರ್ಗ ಮತ್ತು ಧಾರವಾಡದಲ್ಲಿ ತಲಾ ಒಂದೊಂದು ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ 156 ಪ್ರಕರಣ ಹೊರಗಡೆಯಿಂದ ಬಂದವರಾಗಿದ್ದಾರೆ.
ದೇಶದಲ್ಲಿ 165,829 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 158,613 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,713 ಮಂದಿ ಮೃತಪಟ್ಟಿದ್ದಾರೆ. 71,106 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,920,078 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 362,359 ಜನರು ಮೃತಪಟ್ಟಿದ್ದಾರೆ 2,591,965 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail