NEWSನಮ್ಮರಾಜ್ಯ

ಕೊರೊನಾ ಮುಕ್ತ ರಾಜ್ಯವಾಗಿಸಲು ಸರ್ಕಾರದೊಂದಿಗೆ ಪ್ರತಿಯೊಬ್ಬರೂ  ಕೈಜೋಡಿಸಿ

 ಹೆರಿಗೆ ಆಸ್ಪತ್ರೆಯ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಲ್ಲಾ ವರ್ಗದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಧ್ಯೇಯವಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಶಾಂತನಗರದ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ 30 ಹಾಸಿಗೆ  ಸಾಮರ್ಥ್ಯವುಳ್ಳ ಸುಸಜ್ಜಿತ ಹೆರಿಗೆ ಆಸ್ಪತ್ರೆಯ ಉದ್ಘಾಟನೆ ಹಾಗೂ ಅಗ್ರಹಾರ ದಾಸರಹಳ್ಳಿಯ ಎಂ.ಸಿ. ಬಡಾವಣೆಯಲ್ಲಿ 200 ಹಾಸಿಗೆಯ ಸಾಮರ್ಥ್ಯ ದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಹೆರಿಗೆ ಆಸ್ಪತ್ರೆಯನ್ನು 7 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ, ನವನಗರೋತ್ಥಾನ ಯೋಜನೆ ಅಡಿಯಲ್ಲಿ  35 ರೂ. ಕೋಟಿಗಳ ವೆಚ್ಚದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಒಪಿಡಿ ಬ್ಲಾಕ್, ಲ್ಯಾಬ್, ಫಾರ್ಮಸಿ, ತುರ್ತು ಚಿಕಿತ್ಸಾ ಘಟಕ, ಐ.ಸಿ.ಯು, ಓಟಿ, ಡಯಾಲಿಸಿಸ್ ಸೆಂಟರ್ ಎಕ್ಸೆರೇ ವಿಭಾಗ, ಕ್ಯಾಂಟೀನ್ ಹಾಗೂ ಜನರಲ್ / ಸ್ಪೆಷಲ್ ವಾರ್ಡ್‍ಗಳು ಆಧುನಿಕ ಸೌಲಭ್ಯಗಳನ್ನೊಳಗೊಂಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇದಾಗಲಿದ್ದು, ಗೋವಿಂದರಾಜನಗರದ ವಿಧಾನಸಭಾ ಕ್ಷೇತ್ರದ ಸುತ್ತಮುತ್ತಲಿನ ಕಡು ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರಲಿದೆ ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಕೋವಿಡ್ – 19 ಸೋಂಕಿನ ಸಂಕಷ್ಟದ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಉತ್ತಮವಾಗಿ ನಿರ್ವಹಿಸುತ್ತಿದೆ. ಕೊರೊನಾ  ಹಿಡಿತದಿಂದ ರಾಜ್ಯವನ್ನು ತಪ್ಪಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರೂ ಸಹ ಸರ್ಕಾರದ ಕ್ರಮಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.

ವೈದ್ಯಕೀಯ  ಸಿಬ್ಬಂದಿ ಕೋವಿಡ್ – 19ರ ಸಮರದಲ್ಲಿ ಮಂಚೂಣಿಯಲ್ಲಿರುವ ಯೋಧರು. ಕರ್ತವ್ಯನಿರತ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಅಹಿತಕರ ಘಟನೆಗಳು ಸಂಭವಿಸಿದ್ದರೂ, ಎದೆಗುಂದದೆ, ಜೀವದ ಹಂಗು ತೊರೆದು ತಮ್ಮ ಸೇವೆಯನ್ನು ಮುಂದುವರೆಸುತ್ತಿರುವ ವೈದ್ಯರು ಮತ್ತಿತರ ಆರೋಗ್ಯ ಸಿಬ್ಬಂದಿಯನ್ನು ಅಭಿನಂದಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ವೈದ್ಯರು, ನರ್ಸ್‍ಗಳು, ಅರೆವೈದ್ಯಕೀಯ ಸಿಬ್ಬಂದಿ ತಂತ್ರಜ್ಞರು ಹಾಗೂ ಆಶಾ ಕಾರ್ಯಕರ್ತರಿಗೆ ಅಪಾಯ ಸಂಭವಿಸಿದರೆ 50 ಲಕ್ಷ ರೂ.ಗಳ ವಿಮೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಆಶಾ ಕಾರ್ಯಕರ್ತೆಯರ ವಿಶೇಷ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ  ವತಿಯಿಂದ ತಲಾ 3000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ  ತಿಳಿಸಿದರು.

ವೈದ್ಯಕೀಯ ಸೇವೆಗಳ ಕ್ಷೇತ್ರದಲ್ಲಿ ಸುಸಜ್ಜಿತ ಸೌಕರ್ಯಗಳು ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಇಂತಹ ಸುಸಜ್ಜಿತ ಕಟ್ಟಡಗಳ ನಿರ್ವಹಣೆ ಹಾಗೂ ಸ್ವಚ್ಛತೆ ಹಿಂದೆಂದಿಗಿಂತಲೂ ಹೆಚ್ಚಿನ ಮಹತ್ವ ಪದೆಡುಕೊಳ್ಳುತ್ತದೆ. ಆರೋಗ್ಯ ರಕ್ಷಕರು ಹಾಗೂ ಸ್ವಚ್ಛತಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ ಗೌರವಿಸೋಣ ಎಂದು ತಿಳಿಸಿದರು.

ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಸೇರಿದಂತೆ ಹಲವಾರು ಸಚಿವರು ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ
https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್