NEWSನಮ್ಮರಾಜ್ಯ

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೆ ಎಫ್ಐಆರ್ ಗ್ಯಾರಂಟಿ

ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡರು ಕೆಲವರು ಉಲ್ಲಂಘನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಅಂಥವರ ವಿರುದ್ಧ ಮುಲಾಜಿಲ್ಲೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ಶರತ್‌ ಎಚ್ಚರಿಕೆ ನೀಡಿದ್ದಾರೆ.

ಸೋಂಕು ತಡೆಗೆ ಕೊರೊನಾ ವಾರಿಯರ್ಸ್‌ ಶ್ರಮಿಸುತ್ತಿದ್ದರು ಅದನ್ನು ಕಡೆಗಣಿಸುವವರ ಸಂಖ್ಯೆ ಹೆಚ್ಚಾಗಿದೆ.  ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಆದರೆ ಹಲವರು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಲು ಮುಂದಾಗುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳನ್ನು, ಹೊರ ರಾಜ್ಯದಿಂದ ಬಂದ ಗರ್ಭಿಣಿ ಮಹಿಳೆಯರು, 10 ವರ್ಷದೊಳಗಿನ ಮಕ್ಕಳು, 65ವರ್ಷ ಮೇಲ್ಪಟ್ಟ ಹಿರಿಯರು  ಇನ್ನಿತರ ರೋಗಗಳಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ನಡುವೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ.  ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೆ ಅಂತವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ತದನಂತರ‌ವು ಮೇಲಿಂದ‌ ಮೇಲೆ ಇದೇ ರೀತಿ ತಪ್ಪು ಮಾಡಿದರೆ ಅಂತಹವರನ್ನು ಬಂಧಿಸಿ   ಎಫ್.ಐ.ಆರ್. ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ