NEWSಕೃಷಿನಮ್ಮರಾಜ್ಯ

ಬಿಪಿಎಲ್‌ ಕಾರ್ಡ್‌ ರದ್ದು ನೆಪದಲ್ಲಿ ರೈತರ ಅನ್ನದ ತಟ್ಟೆಗೆ ಕೈ ಹಾಕುವುದು ಮೂರ್ಖತನ

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಣಿ ಟ್ವಿಟ್‌ನಲ್ಲಿ ಅಸಮಾಧಾನ   

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವಿಟ್‌ ಮಾಡಿರುವ ಮಾಜಿ ಸಿಎಂ ಎಚ್‌ಡಿಕೆ ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನು ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ. ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಈ ಕಾರ್ಡೆ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ?  ಹೀಗೆ ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

@hd_kumaraswamy

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ