NEWSನಮ್ಮರಾಜ್ಯ

ಸರಳವಾಗಿ ದೊಡ್ಡಗೌಡರ ಹುಟ್ಟುಹಬ್ಬ, ಜೆಡಿಎಸ್‌ ಕಾರ್ಯಕರ್ತರಿಂದ  ರಕ್ತದಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್  ವರಿಷ್ಠ  ಎಚ್.ಡಿ ದೇವೇಗೌಡ ಅವರು ಈ ಬಾರಿ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು.

ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂಬ ಮನವಿ ಮಾಡಿದ್ದರು, ಆದರೂ ಪಕ್ಷದ ಕಚೇರಿಯಲ್ಲಿ ಅವರ ಬೆಂಬಲಿರು 88 ಕೆಜಿಯ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೇವೇಗೌಡರ ಮನೆಗೆ ಬಂದು ಶುಭಾಶಯ ಕೋರಿದರು. ಈ ವೇಳೆ ಊಟ ಮಾಡಿಕೊಂಡು ಹೋಗುವಂತೆ ಗೌಡರು ಹೇಳಿದರು. ಅದನ್ನು ಮೀರಲಾಗದೇ  ಶಿವಕುಮಾರ್  ಮಾಜಿ ಪ್ರಧಾನಿಗಳ ಜತೆ ಊಟ ಸವಿದರು.

ಡಿಸಿಎಂ ಅಶ್ವತ್ಥ ನಾರಾಯಣ ಅವರು ಕೂಡ  ಗೌಡರ ಮನೆಗೆ ಭೇಟಿ ನೀಡಿ ಶುಭ ಕೋರಿದರು. ಹೀಗೆಯೇ ಹಲವು ಗಣ್ಯರು ಬಂದು ಶುಭಾಶಯ ಕೋರಿದರು. ಅವರನ್ನು ದೊಡ್ಡಗೌಡರು ಆತ್ಮೀಯವಾಗಿಯೇ ಬರಮಾಡಿಕೊಂಡರು.  ತಮ್ಮ 88ನೇ ವಯಸ್ಸಿನಲ್ಲೂ ಇನ್ನು 22ನೇ ವಯಸ್ಸಿನವರಂತೆ ಲವಲವಿಕೆಯಿಂದಲೇ ಬಂದ ಗಣ್ಯರ ಜತೆ  ಮಾತನಾಡುತ್ತಿದ್ದರು. ಇದು ನಿಜಕ್ಕೂ ಅಲ್ಲಿ ಸೇರಿದ್ದ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸನ್ನು ಹೆಚ್ಚಿಸಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು 1989 ರಲ್ಲಿ ದೇವೇಗೌಡರನ್ನು ಹಾಗೂ 1999ರಲ್ಲಿ ಕುಮಾರಸ್ವಾಮಿ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದರು. ಅದಾದ ಬಳಿಕ  2018 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದನ್ನು ನೋಡಿದರೆ ರಾಜಕೀಯದಲ್ಲಿ ಯಾರು ಶತ್ರುಗಳೂ ಅಲ್ಲ ಅಂತ್ಯೆಯೇ ಮಿತ್ರರು ಅಲ್ಲ ಎಂಬ ಮಾತು ಸತ್ಯ ಎಂಬುವುದು ಇವರ ಭೇಟಿಯಿಂದ  ಇನ್ನಷ್ಟು ಸಾಭೀತಾದಂತ್ತಾಗಿದೆ.

ಇನ್ನು ದೊಡ್ಡಗೌಡರ   ಹುಟ್ಟುಹಬ್ಬದ ಹಿನ್ನೆಲೆಯಲ್ಲಿ 88 ಜೆಡಿಎಸ್ ಕಾರ್ಯಕರ್ತರು ರಕ್ತದಾನ ಮಾಡಿದರು. ಗೌಡರು ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಯಾರು ಗುಂಪಾಗಿ ಸೇರಬೇಡಿ ನಮ್ಮ ಹುಟ್ಟು ಹಬ್ಬವನ್ನು ಅಭಿಮಾನಿಗಳು ಎಲ್ಲಿಯೂ ಆಚರಿಸಬೇಡಿ ಎಂದು ಮನವಿ ಮಾಡಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್