ಬೆಂಗಳೂರು: ರಾಜ್ಯಸಭೆ ಚುನಾವಣೆಯ ನನ್ನ ಸ್ಪರ್ಧೆ ನಿರ್ಧಾರದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಂತಸ ಉಂಟು ಮಾಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದರು.
ಜೆಡಿಎಸ್ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಿ ಬಳಿಕ ಮಾತನಾಡಿ, ಪಕ್ಷ ಸಂಘಟನೆ ಮಾಡುವುದು ನನ್ನ ಆದ್ಯತೆಯಾಗಿದೆ . ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶವಿರಲಿಲ್ಲ. ಆದರೆ ಪಕ್ಷದ ಶಾಸಕರು ಶಾಸಕಾಂಗ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿ ನನ್ನ ಸ್ಪರ್ಧೆಗೆ ಒತ್ತಡ ಹೇರಿದ್ದರು. ಇದರಿಂದ ನಾನು ಕಣಕ್ಕೀಲಿಯಬೇಕಾಯಿತು ಎಂದು ವಿವರಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಸೋನಿಯಾ ಗಾಂಧಿ ಘೋಷಣೆ ಮಾಡಿದರು. ಆದರೆ ಮತ್ತೊಬ್ಬ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮಾತನಾಡಿಕೊಂಡು, ಈ ವೇಳೆ ಸೋನಿಯಾ ಗಾಂಧಿ ಅವರೊಂದಿಗೆ ನಾನು ಮಾತನಾಡುವಂತೆ ತಿಳಿಸಿದರು. ಈ ಕಾರಣಕ್ಕಾಗಿ ಶನಿವಾರ ಮಾತುಕತೆ ನಡೆಸಿದ್ದೆ ಎಂದು ವಿವರಿಸಿದರು.
ಸೋನಿಯಾ ಗಾಂಧಿ ಅವರು ಎಲ್ಲಾ ರೀತಿಯ ಬೆಂಬಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಟ್ಟಿನಲ್ಲಿ ಕಾರ್ಯಕರ್ತರ ಒತ್ತಡ, ಸೋನಿಯಾ ಗಾಂಧಿಯವರ ಭಾವನೆ ಹಾಗೂ ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳ ಮುಖಂಡರ ಮನವಿ ಮೇರೆಗೆ ರಾಜ್ಯಸಭೆಗೆ ಸ್ಪರ್ಧೆ ಮಾಡುವ ನಿರ್ಧಾರ ತೆಗೆದುಕೊಂಡೆ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬಿಜೆಪಿಯವರು ಇಬ್ಬರು ಅಭ್ಯರ್ಥಿಗಳನ್ನು ರಾಜ್ಯಸಭೆ ಚುನಾವಣೆ ಕಣಕ್ಕಿಳಿಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದ ಶಿಫಾರಸಿನ ಹೊರತಾಗಿ ಬೇರೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಚುನಾವಣಾ ನಿಟ್ಟಿನಲ್ಲಿ ಬಿಜೆಪಿಯ ಯಾರನ್ನು ಸಂಪರ್ಕ ಮಾಡಿಲ್ಲ. ನನ್ನ ರಾಜಕೀಯ ಜೀವನವೆಲ್ಲಾ ಜಾತ್ಯತೀತವಾಗಿಯೇ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಅವಿರೋಧ ಆಯ್ಕೆ ಆಗುವ ಮೂಲಕ ಪ್ರಾದೇಶಿಕ ಪಕ್ಷಕ್ಕೆ ಒಂದು ಅವಕಾಶ ಸಿಕ್ಕಿದೆ ಎಂದರು.
ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳಿಗೆ ಹೋರಾಟ ನಡೆಸುತ್ತೇನೆ. ನಮ್ಮ ಪಕ್ಷ ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗಿಲ್ಲ. ರಾಜ್ಯಸಭೆಯಲ್ಲಿ ಮಾತನಾಡಲು ಹೆಚ್ಚಿನ ಅವಕಾಶ ನೀಡುವಂತೆ ಸಭಾಪತಿಗೆ ಕೇಳುತ್ತೇನೆ. ಇದು ನನ್ನ ಕಡೆಯ ಅವಕಾಶವೆನೋ ಗೊತ್ತಿಲ್ಲ ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...