NEWSನಮ್ಮರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ, ಅದ್ದೂರಿ ಆಚರಣೆ ಬೇಡ ಎಂದ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ  ಎಚ್‌.ಡಿ.ದೇವೇಗೌಡ ಅವರ 88ನೇ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಕೊರೊನಾ ಸೋಂಕು ಎಲ್ಲೆಡೆ ಸರವೇಗದಲ್ಲಿ ಹರಡುತ್ತಿರುವ ಹಿನ್ನೆಯಲ್ಲಿ ಯಾರು ಕೂಡ ಗುಂಪಾಗಿ ಬಂದು ಶುಭಾಶಯ ಕೋರಬೇಡಿ. ಜತೆಗೆ ಎಲ್ಲಯೂ ನಮ್ಮ ಜನ್ಮ ದಿನ ಆಚರಿಸಬೇಡಿ ಎಂದು ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಟ್ವಿಟರ್‌ನಲ್ಲಿ ಶುಭಾಶಯ ಕೋರಿದ ಗಣ್ಯರು

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ ಸನ್ಮಾನ್ಯ ಶ್ರೀ

ಎಚ್‌.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು. ದೇವರ ಅನುಗ್ರಹ ತಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಶುಭಾಯ ಕೋರಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ಎಚ್‌.ಡಿ.ದೇವೇಗೌಡ ರು. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರ ಸ್ವಾಮಿ ಕೋರಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿಷ್‌

ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳು, ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ದೇಶದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿಷ್‌ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!