ಹಾಸನ: ಬಹು ಕೋಟಿ ರೂಪಾಯಿ ವೆಚ್ಚದಲ್ಲಿ ಹಾಸನ ನಗರವನ್ನು ಹೊರ ವಲಯದೊಂದಿಗೆ ಸಂಪರ್ಕಿಸುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕ ಪ್ರೀತಂ ಗೌಡ ಇಂದು ಚಾಲನೆ ನೀಡಿದರು.
ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಗೊರೂರು ರಸ್ತೆಗೆ ಹೊಂದಿಕೊಂಡಿರುವ ದೇವೇಗೌಡ ನಗರ ಮಾರ್ಗವಾಗಿ ಕೃಷ್ಣಾನಗರ ತಲುಪುವ ರಸ್ತೆ ಹಾಗೂ 2 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಘಟ್ಟದಿಂದ ಗವೇನಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ ಬೈಪಾಸ್‍ಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯವರು ಸುಮಾರು 45 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಆ ಅನುದಾನದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಮುಖಾಂತರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ನಗರದ ಸಮೀಪದಲ್ಲೇ ಇರುವ ಗವೇನಹಳ್ಳಿ, ದೇವೇಗೌಡನಗರ, ಕೃಷ್ಣಾನಗರ, ತಟ್ಟೇಕೆರೆ ಹಾಗೂ ಇತರೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಲೋಕೋಪಯೋಗಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಒಟ್ಟು ನೂರು ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ದಿನೇದಿನೆ ಕೋವಿಡ್-19 ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗ್ರತೆ ವಹಿಸಬೇಕು. ವಿನಾಕಾರಣ ಹೊರಗಡೆ ಓಡಾಡಬಾರದು ಎಂದು ಮನವಿ ಮಾಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail