NEWSದೇಶ-ವಿದೇಶನಮ್ಮರಾಜ್ಯ

ಜೆಡಿಎಸ್‌ ವರಿಷ್ಠ ದೇವೇಗೌಡರಿಂದ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜೂನ್‌ 19ರಂದು ನಡೆಯಲಿರುವ  ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಗೌಡರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಸ್ವಂತಬಲದಿಂದ ಆಯ್ಕೆಯಾಗುವಷ್ಟು ಶಾಸಕರ ಸಂಖ್ಯೆ ಇಲ್ಲದಿರುವ ಕಾರಣ ಕಾಂಗ್ರೆಸ್ ಬೆಂಬಲ ನೀಡಿದೆ.  ಈ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೂರವಾಣಿ ಕರೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ  ಗೌಡರಲ್ಲಿ ಮನವಿ ಮಾಡಿದರು. ಅಲ್ಲದೇ  ದೇಶದ ಹಲವು ನಾಯಕರು ಮನವಿ ಮಾಡಿದ್ದರಿಂದ ಗೌಡರು ಸ್ಪರ್ಧೆಗೆ ಒಪ್ಪಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇನ್ನು ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಎರಡನೇ ಬಾರಿಗೆ ರಾಜ್ಯಸಭೆಯನ್ನು ಪ್ರವೇಶಿಸಲು ಮುಂದಾಗಿದ್ದು, ಈ ಹಿಂದೆ ಹಲವು ಬಾರಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ ಕೆಲವು ಬಾರಿ ಸೋಲು ಅನುಭವಿಸಿದ್ದಾರೆ. ಅದರಂತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಗೌಡರನ್ನು ರಾಜ್ಯಸಭೆಗೆ ಬೆಂಬಲಿಸಲು ಕರೆಮಾಡಿ ಸ್ವತಃ ಮನವಿ ಮಾಡಿಕೊಂಡಿದ್ದರು. ವಿವಿಧ ಪಕ್ಷಗಳ ರಾಷ್ಟ್ರನಾಯಕರ ಮನವಿಯನ್ನು ತಿರಸ್ಕರಿಸಲಾಗದೆ ಗೌಡರು ಇಂದು ನಾಮಪತ್ರಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮಾಜಿ ಸಚಿವರಾದ ಎಚ್. ಡಿ. ರೇವಣ್ಣ ಬಂಡೆಪ್ಪ ಕಾಶೆಂಪೂರ್ ಇತರರು ಇದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!