NEWSನಮ್ಮರಾಜ್ಯ

ಅಭಿವೃದ್ಧಿಯಿಂದ ಕಲ್ಯಾಣ ಕರ್ನಾಟಕದ ಪರಿಕಲ್ಪನೆ ಸಾಕಾರಗೊಳ್ಳಬೇಕು: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಹೆಸರಿಗಷ್ಟೇ ಅಲ್ಲ ವಾಸ್ತವದಲ್ಲೂ ಅದು ಸಾಬೀತಾಗಬೇಕು. ಆ ನಿಟ್ಟಿನಲ್ಲಿ ಸಂಘದೊಂದಿಗೆ ಸರ್ಕಾರ ಕೂಡ ಕೈ ಕೋಡಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಕಲ್ಯಾಣ ಕರ್ನಾಟಕ‌ ಮಾನವ ಸಂಪನ್ಮೂಲ‌, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಲಬುರಗಿ ವಿಭಾಗದ ನೂತನ ಕಚೇರಿ ಉದ್ಘಾಟನೆಯನ್ನು ವಿಡಿಯೋ ಕಾರ್ಯಕ್ರಮದ ಮೂಲಕ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನೆರವೇರಿಸಿ  ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಈ ಸಂಘವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಫೆಬ್ರವರಿ 10-2020 ರಂದು ಹೈದರಾಬಾದ್ ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ನಮ್ಮ ರಾಜ್ಯ ಸರ್ಕಾರ ಘೋಷಿಸಿತ್ತು. ಕೇವಲ ಹೆಸರಿನಿಂದ ಕಲ್ಯಾಣ ಕರ್ನಾಟಕ ಎಂದು ಕರೆದರೆ ಸಾಲದು ಈ ಪ್ರದೇಶದ ಆರು ಜಿಲ್ಲೆಗಳ ನಿಜವಾದ ಅಭಿವೃದ್ಧಿ ಸಾಧಿಸುವ ಮೂಲಕ ಕಲ್ಯಾಣ ಪರಿಕಲ್ಪನೆ ನಿಜವಾದ ಅರ್ಥದಲ್ಲಿ ಸಾಕಾರಗೊಳ್ಳಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ಈ ಭಾಗದ ಜನರಲ್ಲಿ ಕೌಶಲ ಸುಧಾರಿಸಿ ಉತ್ಪಾದನೆ ಮತ್ತು ಸೇವಾ ವಲಯಗಳಲ್ಲಿ ಪರಿಣಾಮಕಾರಿ ಬೆಳವಣಿಗೆ ಸಾಧಿಸುವುದು ನಮ್ಮ ಗುರಿಯಾಗಿದೆ. ಕಲ್ಯಾಣ ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಸಂಘವು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಿದೆ ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಕೃಷಿ, ಆರೋಗ್ಯ, ಶಿಕ್ಷಣ, ಸ್ವಯಂ ಉದ್ಯೋಗ ಗ್ರಾಮ ಸಬಲೀಕರಣ ಯುವಜನ ಹಾಗೂ ಮಹಿಳಾ ಸಬಲೀಕರಣ ಮತ್ತು ನೈಸರ್ಗಿಕ ತತ್ವಗಳನ್ನು ಸಾಧಿಸಿ ಕಲ್ಯಾಣ ಕರ್ನಾಟಕದ ಜನರ ಬದುಕಿನಲ್ಲಿ ಹೊಸ ಶಕೆ ಸಂಘದ ಮೂಲಕ ಪ್ರಾರಂಭ ವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 500 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ತೆಗೆದಿರಿಸಿದೆ. ಜತೆಗೆ ಕಲ್ಯಾಣ ಕರ್ನಾಟಕ ಭಾಗದ ಧುರೀಣರು ಮಾಜಿ ಸಂಸದರೂ ಆದ ಡಾ. ಬಸವರಾಜ ಪಾಟೀಲ್ ಸೇಡಂ ಅವರು ಕ್ರಾಂತಿಕಾರಕ ಬದಲಾವಣೆಗೆ ಮುನ್ನುಡಿ ಬರೆಯಲು ಸಮರ್ಥರಿದ್ದಾರೆ ಎಂದು ಹೇಳಿದರು.

ಸ್ವಾವಲಂಬನೆಯ ಹಾದಿಯಲ್ಲಿ ಪ್ರಧಾನಿ ಮೋದಿಯವರು ಘೋಷಿಸಿರುವ ಆತ್ಮ ನಿರ್ಭರ್‌ ಭಾರತ್ ಅಭಿಯಾನ ಅತ್ಯಂತ ಸೂಕ್ತವಾದುದಾಗಿದೆ ಸ್ಥಳೀಯ ಅಸ್ಮಿತೆ ಕಾಪಾಡಿಕೊಂಡು ಜಾಗತಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ನಿಟಿನಲ್ಲಿ ಸಂಘ ಸಾಗಬೇಕು ಎಂದು ಸಲಹೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಸಂಘದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರುವ ದೃಷ್ಟಿಯಿಂದ ಮೂರು ಸಾವಿರ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿರುವುದು ಶ್ಲಾಘನೀಯ, ಸಂಸ್ಥೆಯ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಾವಯವ ಕೃಷಿ ಕೇಂದ್ರಗಳ ಸ್ಥಾಪನೆ ವ್ಯಕ್ತಿತ್ವ ವಿಕಸನಕ್ಕಾಗಿ ವಿಚಾರ ಸಂಕಿರಣ ಸ್ವಯಂ ಉದ್ಯೋಗ ಹಾಗೂ ಕೌಶಲ ತರಬೇತಿ ಆರೋಗ್ಯ ಶಿಬಿರಗಳನ್ನು ಆಯೋಜಿಸಲು ಉದ್ದೇಶಿಸಿರುವುದು ಸಕಾಲಿಕ ಎಂದರು.

ಯುವಜನ ಹಾಗೂ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ ಅಲ್ಲದೆ ಗ್ರಾಮಗಳ ಸಬಲೀಕರಣಕ್ಕಾಗಿ ಆರ್ಥಿಕ ಉತ್ತೇಜನ ನೀಡುವುದರ ಜೊತೆಗೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ನಾನು ಭಾವಿಸಿದ್ದೇನೆ ಎಂದರು.

ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಜೆ ಪುಟ್ಟಸ್ವಾಮಿ, ಸಂಸದ ಉಮೇಶ್ ಜಾದವ್, ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರ್ ಗೌಡ ಪಾಟೀಲ್ ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ