NEWSರಾಜಕೀಯಸಂಸ್ಕೃತಿ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಂಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ 78 ಕೋಟಿ ರೂ. ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಿ   ಮಾತನಾಡಿದರು.

ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸುವುದರೊಂದಿಗೆ ಆರೋಗ್ಯ, ಘನತ್ಯಾಜ್ಯ ವಿಲೇವಾರಿ, ಇನ್ನಿತರ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ನಿರ್ಮಲಾನಂದನಾಥ‌ ಮಹಾಸ್ವಾಮಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಉಪಸ್ಥಿತಿಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿಗಳಾದ ಗೋವಿಂದ.ಎಂ.ಕಾರಜೋಳ, ಲಕ್ಷ್ಮಣ್ ಸಂಗಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಚಿವರಾದ  ಕೆ.ಗೋಪಾಲಯ್ಯ, ಬಿ.ಎ ಬಸವರಾಜು(ಬೈರತಿ), ಕೆ.ಸಿ.ನಾರಾಯಣಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಹಾಪೌರ ಎಂ.ಗೌತಮ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಸಂಸದರುಗಳಾದ ಬಿ.ಎನ್.ಬಚ್ಚೇಗೌಡ, ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ, ಶಾಸಕರಾದ  ಡಿ.ಕೆ.ಶಿವಕುಮಾರ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಟಿ.ವೆಂಕಟರಮಣಯ್ಯ, ಶರತ್‌ ಕುಮಾರ್ ಬಚ್ಚೇಗೌಡ, ಸಿನೆಮಾ ನಟರಾದ ಪುನೀತ್‌ ರಾಜ್‌ಕುಮಾರ್, ಜಗ್ಗೇಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ..ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.

1 Comment

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ