ಬೆಂಗಳೂರು: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ. ಮಲ್ಲಿಕಾರ್ಜುನ ಖರ್ಗೆ ಸೋಮವಾರ ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಜೂನ್ 19 ರಂದು ನಡೆಯಲಿರುವ ಚುನಾವಣಾ ಅಭ್ಯರ್ಥಿಯಾಗಿ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್.ವಿ.ದೇಶಪಾಂಡೆ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ಇನ್ನು ಬೆಳಗ್ಗೆ ಅಷ್ಟೇ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ಬಿ ಫಾರ್ಮ್ ನೀಡಿದ್ದರು.