NEWSನಮ್ಮರಾಜ್ಯ

ಮೇ 28ರಂದು ಪಕ್ಷಾಂತರ ನಿಷೇಧ ಕಾಯ್ದೆ ಕುರಿತ ಸಭೆ

ವಿಧಾನಸೌಧದ ಆಯೋಜನೆ l ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಮೇ 28 ರಂದು ಗುರುವಾರ ಬೆಳಗ್ಗೆ 10-30 ಗಂಟೆಗೆ ವಿಧಾನ ಸೌಧದ ಮೊದಲನೆಯ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ರಾಜ್ಯ ವಿಧಾನ ಸಭೆಯ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ, ರಾಜ್ಯ ವಿಧಾನ ಸಭೆಯ ಸರ್ಕಾರದ ಮುಖ್ಯ ಸಚೇತಕ ವಿ ಸುನೀಲ್ ಕುಮಾರ್,  ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಶಾಸಕರಾದ ಕೆ.ಜಿ. ಬೋಪಯ್ಯ, ಉಮೇಶ್ ವಿಶ್ವನಾಥ ಕತ್ತಿ ಹಾಗೂ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಪ್ರತಿನಿಧಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜ್ಯ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕರಾದ ಕೆ.ಆರ್. ರಮೇಶ್ ಕುಮಾರ್, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಅಜಯ್ ಧರ್ಮಸಿಂಗ್ ಮತ್ತು ಡಾ. ಜಿ. ಪರಮೇಶ್ವರ್  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳಾಗಿ ಹಾಗೂ ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ, ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ಎಂ.ಕೆ. ಶಿವಲಿಂಗೇಗೌಡ, ವೆಂಕಟರಾವ್ ನಾಡಗೌಡ ಮತ್ತು ಎ. ಟಿ. ರಾಮಸ್ವಾಮಿ ಅವರು ಜಾತ್ಯತೀತ ಜನತಾದಳ ಪಕ್ಷದ ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ.

ಅಲ್ಲದೆ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಮತ್ತು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್ ವೈ ವಟವಟಿ ಅವರೂ ಸಭೆಯಲ್ಲಿ ಹಾಜರಿರುತ್ತಾರೆ ಎಂದು  ಪ್ರಕಟಣೆ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?